ಕರ್ನಾಟಕ

karnataka

ETV Bharat / state

ಅತಿಥಿ ಶಿಕ್ಷಕರಿಗೆ ಕೆಲಸ, ವೇತನ ನೀಡುವಂತೆ ಸರ್ಕಾರಕ್ಕೆ ಮನವಿ - Kushtagi

ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆಯೊಂದಿಗೆ ಕೋವಿಡ್ ಪ್ಯಾಕೇಜ್​​ ನೀಡುವಂತೆ ಆಗ್ರಹಿಸಿ ತಹಶೀಲ್ದಾರ್​ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

Appeals to Govt
ಅತಿಥಿ ಶಿಕ್ಷಕರಿಗೆ ವೇತನ ನೀಡುವಂತೆ ಸರ್ಕಾರಕ್ಕೆ ಮನವಿ

By

Published : Sep 1, 2020, 9:49 AM IST

ಕುಷ್ಟಗಿ: ಸರ್ಕಾರಿ ಶಾಲೆಗಳ ಉಳಿವಿಗಾಗಿ ಸೇವೆಯಲ್ಲಿರುವ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆಯೊಂದಿಗೆ ಕೋವಿಡ್ ಪ್ಯಾಕೇಜ್​​ ನೀಡುವಂತೆ ಆಗ್ರಹಿಸಿ ಅತಿಥಿ ಶಿಕ್ಷಕರ ಹೋರಾಟ ಸಮಿತಿ ಹಾಗೂ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಕುಷ್ಟಗಿ ತಹಶೀಲ್ದಾರ್​ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಅತಿಥಿ ಶಿಕ್ಷಕರ ಹೋರಾಟ ಸಮಿತಿಯಿಂದ ಸರ್ಕಾರಕ್ಕೆ ಮನವಿ

ಸಮಿತಿ ಅಧ್ಯಕ್ಷ ಶ್ರೀಕಾಂತ ಕಿರಗಿ ಮಾತನಾಡಿ, ಅತಿಥಿ ಶಿಕ್ಷಕರು ಕೊರೊನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಸಂಕಷ್ಡದಲ್ಲಿದ್ದಾರೆ. ಬೇರೆ ಉದ್ಯೋಗ ಗೊತ್ತಿಲ್ಲದ ಅತಿಥಿ ಶಿಕ್ಷಕರು, ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಇವರಿಗೂ ಪ್ಯಾಕೇಜ್ ನೀಡಬೇಕು.

ವರ್ಷದ 12 ತಿಂಗಳು ಕೆಲಸ ಮತ್ತು ವೇತನ ನೀಡಿ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಕಲ್ಪಿಸಬೇಕು. ಸರ್ಕಾರಿ ಶಾಲೆಗಳ ಉಳಿವಿಗೆ, ಫಲಿತಾಂಶ ಹೆಚ್ಚಳಕ್ಕೆ ಅತಿಥಿ ಶಿಕ್ಷಕರ ಸೇವೆಯನ್ನು ಮರೆಯದೆ ಅವರ ಜೀವನಕ್ಕೆ ದಾರಿ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ABOUT THE AUTHOR

...view details