ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲು ಅವಕಾಶ ನೀಡುವಂತೆ ಕೇಳಿಲ್ಲ. ಸದ್ಯ ಸರ್ಕಾರ ನನಗೆ ಕೊಟ್ಟಿರುವ ಜವಾಬ್ದಾರಿಯನ್ನ ನಿಷ್ಠೆಯಿಂದ ನಿರ್ವಹಿಸುವ ಕೆಲಸ ನನ್ನದು ಎಂದು ಸಚಿವ ಹಾಲಪ್ಪ ಆಚಾರ ಹೇಳಿದರು.
75ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ನಿಮಿತ್ತ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ತಳಕಲ್ಲ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಜಿ.ಬಿ. ಮೂಲಿಮನಿ ಅವರನ್ನು ಭೇಟಿಯಾಗಿ ರಾಷ್ಟ್ರಧ್ವಜ ನೀಡಿ ಗೌರವಿಸಿದರು. ಬಳಿಕ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಕೊಪ್ಪಳ ಜಿಲ್ಲೆಯ ಅನೇಕ ಮಹನಿಯರು ಹೆಗಲು ನೀಡಿದ್ದಾರೆ.