ಕೊಪ್ಪಳ: ಕನ್ನಡದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದ್ದಾರೆ.
ನಾಡು, ನುಡಿಯ ಬಗ್ಗೆ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಹಾಲಪ್ಪ ಆಚಾರ್
ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಕನ್ನಡ ಸಾಹಿತ್ಯದ ಚಟುವಟಿಕೆಗಳನ್ನು ಹಮ್ಮಿಕೊಂಡು ಈಗ ಬೆಣಕಲ್ನಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವ ಮೂಲಕ ಇಡಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದು ಕೊಪ್ಪಳದಲ್ಲಿ ಶಾಸಕ ಹಾಲಪ್ಪ ಆಚಾರ್ ಹೇಳಿದ್ದಾರೆ.
ಹಾಲಪ್ಪ ಆಚಾರ್
ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದ ಕುಕನೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ನಾಡು ನುಡಿಗೆ ಅತ್ಯಂತ ಪ್ರಾಚೀನ ಇತಿಹಾಸವಿದೆ. ಕನ್ನಡದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಇದೆ.
ಇನ್ನು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಶ್ರೀ ಅನ್ನದಾನೀಶ್ವರ ಮಹಾಸ್ವಾಮಿಗಳು ಮಾತನಾಡಿ, ಕನ್ನಡ ನಾಡು-ನುಡಿ, ಜನರ ಬಗ್ಗೆ ಕಾವ್ಯದಲ್ಲಿ ಕವಿಗಳು ಬಣ್ಣನೆ ಮಾಡಿದ್ದಾರೆ ಎಂದು ಹೇಳಿದರು.