ಗಂಗಾವತಿ: ಸಿದ್ದಾಪುರ ಗ್ರಾಮದಲ್ಲಿ ಗಂಗಾವತಿಯ ಲಯನ್ಸ್ ಕ್ಲಬ್, ಭಾರತೀಯ ವೈದ್ಯರ ಸಂಘ ಹಾಗೂ ಇತರೆ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಭಾನುವಾರ ಉಚಿತ ಬೃಹತ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಸಿದ್ದಾಪುರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ: ಸಾವಿರಾರು ರೋಗಿಗಳು ಭಾಗಿ - health check up camp in siddapura gangavati
ಸಿದ್ದಾಪುರ ಗ್ರಾಮದಲ್ಲಿ ಗಂಗಾವತಿಯ ಲಯನ್ಸ್ ಕ್ಲಬ್, ಭಾರತೀಯ ವೈದ್ಯರ ಸಂಘ ಹಾಗೂ ಇತರೆ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಇಂದು ಉಚಿತ ಬೃಹತ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಸುಮಾರು ಒಂದುವರೆ ಸಾವಿರ ರೋಗಿಗಳು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಸಿದ್ದಾಪುರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ: ಸಾವಿರಾರು ರೋಗಿಗಳು ಭಾಗಿ
ಕಾರ್ಯಕ್ರಮಕ್ಕೆ ಶಾಸಕ ಬಸವರಾಜ ದಢೇಸ್ಗೂರು ಚಾಲನೆ ನೀಡಿದರು. ಕಾರಟಗಿ, ಕನಕಗಿರಿ ತಾಲೂಕಿನ ಸುಮಾರು ಐವತ್ತಕ್ಕೂ ಹೆಚ್ಚು ಹಳ್ಳಿಗಳಿಂದ ಸುಮಾರು ಒಂದುವರೆ ಸಾವಿರ ರೋಗಿಗಳು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಗಂಗಾವತಿಯ ಬಹುತೇಕ ಖಾಸಗಿ ಆಸ್ಪತ್ರೆಯ ವೈದ್ಯರು, ಉಚಿತ ಶಿಬಿರದಲ್ಲಿ ಪಾಲ್ಗೊಂಡು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ಸಣ್ಣಪುಟ್ಟ ಕಾಯಿಲೆಗಳಿಗೆ ಸ್ಥಳೀಯವಾಗಿಯೇ ಔಷಧಿ ನೀಡಲಾಯಿತು. ಗಂಭೀರ ಸ್ವರೂಪದ ಕಾಯಿಲೆಗಳಿಗೆ ವೈದ್ಯರು ಉನ್ನತ ಚಿಕಿತ್ಸೆಗೆ ಶಿಫಾರಸು ಮಾಡಿದರು.