ಕರ್ನಾಟಕ

karnataka

ETV Bharat / state

ಗಂಗಾವತಿಯಲ್ಲಿ ಪಡಿತರ ಅಕ್ಕಿ ಅಕ್ರಮ ದಾಸ್ತಾನು: 200 ಚೀಲ ವಶಕ್ಕೆ ಪಡೆದ ಅಧಿಕಾರಿಗಳು - Gangavati latest news

ಅಕ್ರಮವಾಗಿ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಿದ್ದ ಮನೆಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಸ್ತಾನು ಮಾಡಿದ್ದ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Gangavati
Gangavati

By

Published : Jun 25, 2020, 10:43 PM IST

ಗಂಗಾವತಿ:ನ್ಯಾಯಬೆಲೆ ಅಂಗಡಿ ಮೂಲಕ ಪಡಿತರ ಚೀಟಿದಾರರಿಗೆ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಸ್ಥಳದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇಲ್ಲಿನ ಮಹಾವೀರ ವೃತ್ತದ ಸಮೀಪವಿರುವ ಚಂದ್ರಹಾಸ ಚಿತ್ರ ಮಂದಿರದ ಬಳಿ ರಾಜಾಸಾಬ ಪೀರಸಾಬಾ ಎಂಬ ವ್ಯಕ್ತಿಯ ಮನೆಯಲ್ಲಿ ಸುಮಾರು 200 ಚೀಲ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಲಾಗಿತ್ತು. ಇಂದು ಮನೆಯ ಮೇಲೆ ಆಹಾರ ಇಲಾಖೆ ಉಪನಿರ್ದೇಶಕ ಕನಕರೆಡ್ಡಿ, ತಹಶೀಲ್ದಾರ್ ಚಂದ್ರಕಾಂತ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಪಡಿತರ ಅಕ್ಕಿ ದಾಸ್ತಾನನ್ನು ವಶಕ್ಕೆ ಪಡೆದಿದ್ದಾರೆ.

ತಲಾ 25 ಕೆಜಿ ತೂಕದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ದಾಸ್ತಾನು ಮಾಡಲಾಗಿದ್ದು, ಇದರ‌ ಮಾರುಕಟ್ಟೆಯ ಮೌಲ್ಯ ಒಂದುವರೆ ಲಕ್ಷ ರೂಪಾಯಿ ಎನ್ನಲಾಗಿದೆ.

ಇದೀಗ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದು, ಸಾರ್ವಜನಿಕರ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ABOUT THE AUTHOR

...view details