ಗಂಗಾವತಿ :ಕೊರೊನಾ ತುರ್ತು ಕಾರ್ಯಕ್ಕೆ ನಿಯೋಜಿತವಾದ ಆರೋಗ್ಯ ಸಿಬ್ಬಂದಿ ಹಾಗೂ ಟೋಲ್ ಪ್ಲಾಜಾದಲ್ಲಿನ ಕೆಲ ಸಿಬ್ಬಂದಿ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿರುವ ಘಟನೆ ತಾಲೂಕಿನ ಹೇಮಗುಡ್ಡದ ಬಳಿ ಸಂಭವಿಸಿದೆ.
ಮೊದಲು ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮಧ್ಯೆ ಗಲಾಟೆ ನಡೆದಿದೆ. ಆ ಬಳಿಕ ಟೋಲ್ ಪ್ಲಾಜಾದ ಸಿಬ್ಬಂದಿ ಮಧ್ಯೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ. ಎರಡೂ ಇಲಾಖೆಯ ಸಿಬ್ಬಂದಿ ಮಧ್ಯೆ ಕರ್ತವ್ಯ ನಿರ್ವಹಣೆಯ ವಿಚಾರವಾಗಿ ಈ ಗಲಾಟೆ ಆರಂಭವಾಗಿದೆ ಎನ್ನಲಾಗಿದೆ.
ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಗಲಾಟೆ ದೃಶ್ಯ.. ಟೋಲ್ಗೇಟ್ನ ಚೆಕ್ಪಾಯಿಂಟ್ ಬಳಿಗೆ ನಿಯೋಜಿಸಲಾಗಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿಯ ಕೆಲಸಕ್ಕೆ ಟೋಲ್ ಪ್ಲಾಜಾದ ಸಿಬ್ಬಂದಿ ಹಸ್ತಕ್ಷೇಪ ಮಾಡಿದ್ದಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿ ಬಳಿಕ ಮಾರಾಮಾರಿ ನಡೆದಿದೆ ಎನ್ನಲಾಗಿದೆ.
ಘಟನೆಯ ಸಂಪೂರ್ಣ ದೃಶ್ಯ ಟೋಲ್ಪ್ಲಾಜಾದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗ್ರಾಮೀಣ ಠಾಣೆಯ ಪೊಲೀಸರು, ಟೋಲ್ ಮತ್ತು ಆರೋಗ್ಯ ಇಲಾಖೆಯ ನೌಕರರ ಮಧ್ಯೆ ಗಲಾಟೆ ನಡೆದಿದೆ. ಈ ಬಗ್ಗೆ ಠಾಣೆಗೆ ಬಂದು ದೂರು ಆಧರಿಸಿ ಗಲಾಟೆ ಮಾಡಿದವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.