ಕರ್ನಾಟಕ

karnataka

ETV Bharat / state

ಧಾರಾಕಾರ ಮಳೆ: ಕೊಪ್ಪಳ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ - ಕೊಪ್ಪಳ ಶಾಲಾ ಕಾಲೇಜಿಗೆ ರಜೆ

ಕೊಪ್ಪಳದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಧಾರಾಕಾರ ಮಳೆ
ಧಾರಾಕಾರ ಮಳೆ

By

Published : Aug 2, 2022, 9:35 AM IST

ಗಂಗಾವತಿ:ಜಿಲ್ಲಾದ್ಯಂತ ಸೋಮವಾರ ಸಂಜೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಂಗಳವಾರ ಶಾಲಾ - ಕಾಲೇಜಿಗೆ ರಜೆ ಘೋಷಣೆ‌ ಮಾಡಿ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.

ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣಕ್ಕೆ ಜನ - ಜೀವನ ಅಸ್ತವ್ಯಸ್ತವಾಗಿದೆ. ಶಾಲೆ - ಕಾಲೇಜಿಗೆ ಹೋಗುವ ಮಕ್ಕಳಿಗೆ ತೊಂದರೆಯಾಗಲಿದೆ. ಹೀಗಾಗಿ ಮಂಗಳವಾರ ಜಿಲ್ಲಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಮಂಗಳವಾರದ ವಾತಾವರಣ ಗಮನಿಸಿ ಬುಧವಾರದ ರಜೆಯ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

(ಇದನ್ನೂ ಓದಿ: ಸುಳ್ಯ, ಕಡಬ ತಾಲೂಕಿನಲ್ಲಿ ಮೇಘಸ್ಫೋಟ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ)

ಇನ್ನು ಬೆಂಗಳೂರು, ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡದಲ್ಲಿ ಮಳೆಗೆ ಗುಡ್ಡ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಭಟ್ಕಳದಲ್ಲಿಯೂ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾ​ಗಿದೆ.

(ಇದನ್ನೂ ಓದಿ:ಭಟ್ಕಳದಲ್ಲಿ ಭಾರಿ ಮಳೆ : ಮನೆ ಮೇಲೆ ಗುಡ್ಡ ಕುಸಿತ, ನಾಲ್ವರು ಸಾವನ್ನಪ್ಪಿರುವ ಶಂಕೆ)

ABOUT THE AUTHOR

...view details