ಗಂಗಾವತಿ:ಆರ್ಆರ್ಆರ್ ಚಿತ್ರ ನಗರದ ಎರಡು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಟಿಕೆಟ್‌ಗೆ ಹೆಚ್ಚುವರಿ ಹಣ ಸುಲಿಗೆ ಮಾಡಲಾಗಿದೆ. ಚಿತ್ರ ಮಂದಿರದ ಮಾಲೀಕರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ದೂರು ನೀಡಿದ್ದಾರೆ.
ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರು ಈ ಬಗ್ಗೆ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, ಚಂದ್ರಹಾಸ ಮತ್ತು ಪೂರ್ಣಿಮಾ ಚಿತ್ರ ಮಂದಿರದ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಬಹು ತಾರಾಗಣ ಇರುವ ಮತ್ತು 800 ಕೋಟಿ ರೂ. ಬಜೆಟ್ ವೆಚ್ಚದ ಚಿತ್ರವನ್ನು ನೋಡಲು ಪ್ರೇಕ್ಷಕರು ತುದಿಗಾಲ ಮೇಲೆ ನಿಂತಿದ್ದರು.