ಗಂಗಾವತಿ (ಕೊಪ್ಪಳ): ಹಿಂದೂಗಳ ಪವಿತ್ರ ಧಾರ್ಮಿಕ ತಾಣವಾದ ಅಂಜನಾದ್ರಿಯಲ್ಲಿ ಹಿಂದೂಯೇತರ ಹಾಗೂ ಅನ್ಯಕೋಮಿನ ವ್ಯಾಪಾರಿಗಳಿಗೆ ವಹಿವಾಟು ನಡೆಸಲು ಅವಕಾಶ ನೀಡಬಾರದು ಎಂಬ ಒತ್ತಾಯವನ್ನು ಹಿಂದೂಪರ ಸಂಘಟನೆಗಳ ಮುಖಂಡರು ಪುನರುಚ್ಚರಿಸಿದ್ದಾರೆ.
ಅನ್ಯಕೋಮಿನ ವ್ಯಾಪಾರಿಗಳ ನಿಷೇಧಕ್ಕೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಅಂಜನಾದ್ರಿಯಲ್ಲಿ ಅಳವಡಿಸಿದ್ದ ಬ್ಯಾನರ್ಗಳನ್ನು ತಹಶೀಲ್ದಾರ್ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ತೆಗೆದು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಹಿಂದೂ ಸಂಘಟನೆಗಳು ನಿಷೇಧಕ್ಕೆ ಪಟ್ಟು ಹಿಡಿದಿದ್ದರಿಂದ ಗುರುವಾರ ಸಮಾಲೋಚನಾ ಸಭೆ ಆಯೋಜಿಸಲಾಗಿತ್ತು.
ಅಂಜನಾದ್ರಿ ದೇಗುಲದ ತಾತ್ಕಾಲಿಕ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತ ಬಸವಣೆಪ್ಪ ಕಳಶೆಟ್ಟಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ವ್ಯಾಪಾರ ನಿಷೇಧಕ್ಕೆ ಮತ್ತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪಟ್ಟು ಹಿಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಬಸವಣೆಪ್ಪ, ಹಿಂದೂ ಧಾರ್ಮಿಕದತ್ತಿ ಮತ್ತು ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮಳಿಗೆಗಳನ್ನು ಮಾತ್ರ ಅನ್ಯ ಕೋಮಿನವರಿಗೆ ನೀಡಲು ಅವಕಾಶವಿಲ್ಲ. ಆದರೆ, ಅಂಜನಾದ್ರಿಯಲ್ಲಿ ಕೆಲ ವ್ಯಾಪಾರಿಗಳು ಖಾಸಗಿ ವ್ಯಕ್ತಿಗಳ ಜಮೀನಿನಲ್ಲಿ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗದು ಎಂದರು.
ಪ್ರತಿಕ್ರಿಯೆ ನೀಡಿದ ಬಸವಣೆಪ್ಪ, ಹಿಂದೂ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮಳಿಗೆಗಳನ್ನು ಮಾತ್ರ ಅನ್ಯ ಕೋಮಿನವರಿಗೆ ನೀಡಲು ಅವಕಾಶವಿಲ್ಲ. ಆದರೆ, ಅಂಜನಾದ್ರಿಯಲ್ಲಿ ಕೆಲ ವ್ಯಾಪಾರಿಗಳು ಖಾಸಗಿ ವ್ಯಕ್ತಿಗಳ ಜಮೀನಿನಲ್ಲಿ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗದು ಎಂದು ಹೇಳಿದರು.