ಕೊಪ್ಪಳ:ಚುನಾವಣೆಯಲ್ಲಿ ಸೋಲಲೆಂದೇ ಅನರ್ಹ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ, ಶಾಸಕ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ಕೆ. ಪಾಟೀಲ್ ನಗರದಲ್ಲಿ ಈಟಿವಿ ಬಾರತನೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಪಕ್ಷಕ್ಕೆ ಹೋಗುವವರನ್ನು ಆಯಾ ಕ್ಷೇತ್ರದ ಜನರು ತಿರಸ್ಕರಿಸಲಿದ್ದಾರೆ. ಆ ಮೂಲಕ ಪಕ್ಷಾಂತರಿಗಳಿಗೆ ಜನ ತಕ್ಕಪಾಠ ಕಲಿಸಲಿದ್ದಾರೆ. ಈ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗುರುವಾರ ಹೊರಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗಿಂತ ಕಾಂಗ್ರೆಸ್ಗೆ ಹೆಚ್ಚು ಸ್ಥಾನಗಳು ಬಂದಿವೆ. ಇದರಿಂದ ಜನರು ಕಾಂಗ್ರೆಸ್ ಜೊತೆಗೆ ಇದ್ದಾರೆ ಎಂಬುದು ಗೊತ್ತಾಗುತ್ತದೆ. ಉಪಚುನಾವಣೆಗೆ ಈಗಾಗಲೇ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಉಳಿದ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ. ಯಾವುದೇ ಕ್ಷೇತ್ರದಲ್ಲಿಯೂ ಗೊಂದಲವಾಗಲಿ, ಭಿನ್ನಮತವಾಗಲಿ ಇಲ್ಲ. ಕೆಲ ಕಾರಣದಿಂದ ಅಭ್ಯರ್ಥಿಗಳ ಘೋಷಣೆಯಾಗಿಲ್ಲ ಅಷ್ಟೇ ಎಂದು ಹೆಚ್ ಕೆ ಪಾಟೀಲ್ ಹೇಳಿದ್ರು.
ಇನ್ನು, ಉಪಚುನಾವಣೆಯಲ್ಲಿ ಜೆಡಿಎಸ್ ಸಹ ಸ್ಪರ್ಧೆ ಮಾಡುವುದರಿಂದ ಮತ ವಿಭಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಗೆಲುವು ಮಾತ್ರ ಕಾಂಗ್ರೆಸ್ನದ್ದೇ ಎಂದು ಹೆಚ್.ಕೆ. ಪಾಟೀಲ್ ಅಭಿಪ್ರಾಯಪಟ್ಟರು.