ಕೊಪ್ಪಳ:ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಂಸದ ಸಂಗಣ್ಣ ಕರಡಿ ಮತ್ತು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಪರಿಹಾರದ ಚೆಕ್ ವಿತರಿಸಿದರು.
ಮನೆಯ ಮೇಲ್ಛಾವಣಿ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ
ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಂಸದ ಸಂಗಣ್ಣ ಕರಡಿ ಮತ್ತು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಪರಿಹಾರದ ಚೆಕ್ ವಿತರಿಸಿದರು.
ನಿನ್ನೆ ಬೆಳಿಗ್ಗೆ ಕೊಪ್ಪಳ ತಾಲೂಕಿನ ಯಲಮಗೇರಿಯಲ್ಲಿ ಮನೆ ಮೇಲ್ಛಾವಣಿ ಕುಸಿದು ಸುಜಾತಾ (22) ಅಮರೇಶ್ (18) ಹಾಗೂ ಗವಿಸಿದ್ದಪ್ಪ ( 15) ಸಾವನ್ನಪ್ಪಿದ್ದರು. ಈ ಹಿನ್ನಲೆ, ಪರಿಹಾರ ನೀಡಲು ತಹಶೀಲ್ದಾರ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಅವರು ಸೂಚನೆ ನೀಡಿದ್ದರು. ಇಂದು ಸಂಸದ ಸಂಗಣ್ಣ ಕರಡಿ,ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಯಲಮಗೇರಿ ಗ್ರಾಮಕ್ಕೆ ತೆರಳಿ ಮೃತ ಮೂವರು ಮಕ್ಕಳ ತಂದೆ ಸೋಮಣ್ಣ ಅವರಿಗೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ,ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ವೇಳೆ ಕೊಪ್ಪಳ ತಹಶೀಲ್ದಾರ್ ಜಿ.ಬಿ. ಮಜ್ಜಿಗೆ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.