ಗಂಗಾವತಿ: ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸ್ಥಾನ ವಹಿಸಿಕೊಂಡು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಹೆಚ್.ಆರ್.ಶ್ರೀನಾಥ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ಕಳುಹಿಸಿದ್ದು, ಕಾಂಗ್ರೆಸ್ ಸೇರುವ ತಯಾರಿ ನಡೆಸಿದ್ದಾರೆ.
ಜೆಡಿಎಸ್ಗೆ ಹೆಚ್.ಆರ್.ಶ್ರೀನಾಥ್ ರಾಜೀನಾಮೆ, ಕಾಂಗ್ರೆಸ್ ಸೇರಲು ಸಿದ್ಧತೆ - ಹೆಚ್ ಅರ್ ಶ್ರೀನಾಥ್ ರಾಜೀನಾಮೆ
ಜೆಡಿಎಸ್ ಮುಖಂಡ ಹೆಚ್.ಆರ್.ಶ್ರೀನಾಥ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಹೆಚ್.ಅರ್. ಶ್ರೀನಾಥ್
ಈಗಾಗಲೇ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಭೇಟಿಯಾಗುತ್ತಿರುವ ಶ್ರೀನಾಥ್, ಶೀಘ್ರ ಗಂಗಾವತಿಯಲ್ಲಿ ದೊಡ್ಡ ಕಾರ್ಯಕ್ರಮ ಆಯೋಜಿಸಿ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಕೈ ಪಕ್ಷ ಸೇರಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಗಂಗಾವತಿ: ವೇದಿಕೆ ಮೇಲೆ ಕಾಂಗ್ರೆಸ್ ಶಾಲಿನೊಂದಿಗೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಪ್ರತ್ಯಕ್ಷ