ಗಂಗಾವತಿ: ಕಲುಬುರಗಿ ಜಿಲ್ಲೆಯಲ್ಲಿ ಸೇವಾಲಾಲ್ ಹಾಗೂ ಮರಿಯಮ್ಮ ದೇವಿ ಮಂದಿರವನ್ನು ಧ್ವಂಸ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ನಗರದಲ್ಲಿ ಲಂಬಾಣಿ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿದೆ.
ಸೇವಾಲಾಲ್ ಮಂದಿರ ಧ್ವಂಸ: ಲಂಬಾಣಿ ಸಮುದಾಯದಿಂದ ಬೃಹತ್ ಪ್ರತಿಭಟನೆ - ಲಂಬಾಣಿ ಸಮುದಾಯದಿಂದ ಬೃಹತ್ ಪ್ರತಿಭಟನೆ
ಕಲುಬುರಗಿ ಜಿಲ್ಲೆಯಲ್ಲಿ ಸೇವಾಲಾಲ್ ಹಾಗೂ ಮರಿಯಮ್ಮ ದೇವಿ ಮಂದಿರವನ್ನು ಧ್ವಂಸ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಗಂಗಾವತಿಯಲ್ಲಿಂದು ಲಂಬಾಣಿ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿತು.
![ಸೇವಾಲಾಲ್ ಮಂದಿರ ಧ್ವಂಸ: ಲಂಬಾಣಿ ಸಮುದಾಯದಿಂದ ಬೃಹತ್ ಪ್ರತಿಭಟನೆ protest](https://etvbharatimages.akamaized.net/etvbharat/prod-images/768-512-5404883-thumbnail-3x2-chai.jpg)
ಪ್ರತಿಭಟನೆ
ಪ್ರತಿಭಟನೆ ನಡೆಸಿದ ಲಂಬಾಣಿ ಸಮುದಾಯ
ನಗರದ ಆನೆಗೊಂದಿ ರಸ್ತೆಯಲ್ಲಿರುವ ಸೇವಾಲಾಲ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಕೇಂದ್ರ ಬಸ್ ನಿಲ್ದಾಣದ ಮೂಲಕ ಆಗಮಿಸಿ, ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಮುಖಂಡ ಲಕ್ಷ್ಮಣ ರಾಠೋಡ, ಕಲುಬುರಗಿ ಜಿಲ್ಲೆಯ ಮಾದಿಹಾಳ್ ತಾಂಡದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಉದ್ದೇಶಕ್ಕೆ ಬಡ ಸಮುದಾಯದ 800 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪ್ರಾರ್ಥನಾ ಮಂದಿರ ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದರು.