ಗಂಗಾವತಿ: ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎರಡು ಪ್ರಕರಣಗಳು ದಾಖಲಾಗಿವೆ. ಈ ಎರಡೂ ದೂರಿನಲ್ಲಿ ಉಲ್ಲೇಖಿಸಲಾಗಿದ್ದ 60 ಜನರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಜಿಲ್ಲಾ ಎಸ್ಪಿ ಅರಣಂಗ್ಶು ಗಿರಿ ತಿಳಿಸಿದರು.
ಆರೋಪಿಗಳ ಪತ್ತೆ ಯತ್ನ: ಪ್ರಕರಣಕ್ಕೆ ಸಂಬಂಧಿಸಿದಂತೆ 60 ಜನರ ಮೇಲೆ ದೂರು ದಾಖಲಿಸಿ 40ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. 121ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಡಿವೈಎಸ್ಪಿಗೆ ತನಿಖೆಯ ಜವಾಬ್ದಾರಿ ವಹಿಸಲಾಗಿದೆ. ಇದುವರೆಗೆ ಐದು ಶೋಧನಾ ತಂಡಗಳನ್ನು ರಚಿಸಲಾಗಿದ್ದು, ತನಿಖೆ ಪ್ರಗತಿ ಹಂತದಲ್ಲಿದೆ. ರಾಜ್ಯ ಮತು ಹೊರ ರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಯತ್ನಿಸಲಾಗುತ್ತಿದೆ ಎಂದು ಎಸ್ಪಿ ಮಾಹಿತಿ ಕೊಟ್ಟಿದ್ದಾರೆ.