ಗಂಗಾವತಿ (ಕೊಪ್ಪಳ):ಅಕ್ರಮವಾಗಿ ಮೊರಂ ಗಣಿಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಕಳೆದ ಮಧ್ಯರಾತ್ರಿ ಮೂರು ಗಂಟೆಯ ವೇಳೆಗೆ ದಾಳಿ ಮಾಡಿದ ಪೊಲೀಸರು, ಒಂದು ಜೆಸಿಬಿ ಹಾಗೂ ಮೂರು ಟಿಪ್ಪರ್ಗಳನ್ನು ವಶಕ್ಕೆ ಪಡೆದುಕೊಂಡರು. ಈ ಘಟನೆ ತಾಲ್ಲೂಕಿನ ಬಂಡ್ರಾಳ ಗ್ರಾಮದಲ್ಲಿ ನಡೆದಿದೆ.
ವೆಂಕಟಗಿರಿ ಹೋಬಳಿಯ ಬಂಡ್ರಾಳ ಗ್ರಾಮದ ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ಮೊರಂ ಗಣಿಗಾರಿಕೆ ಮೂಲಕ ನಿತ್ಯ ಲಕ್ಷಾಂತರ ರೂಪಾಯಿ ಮೌಲ್ಯದ ನೈಸರ್ಗಿಕ ಸಂಪತ್ತನ್ನು ಲೂಟಿ ಹೊಡೆಯಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಗಸ್ತು ನಿಯೋಜಿತ ಪೊಲೀಸ್ ವಾಹನ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಟಿಪ್ಪರ್ಗಳು ಹಾಗೂ ಜೆಸಿಬಿ ವಾಹನಗಳನ್ನು ಜಪ್ತಿ ಮಾಡಿಕೊಂಡರು.