ಕೊಪ್ಪಳ:ಜಿಲ್ಲೆಯಲ್ಲಿ ಎರಡು ಕಡೆ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಟ್ರಾಕ್ಟರ್ ಜಪ್ತಿ ಮಾಡಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ಅಧಿಕಾರಿಗಳ ದಾಳಿ: ಟ್ರಾಕ್ಟರ್ ಜಪ್ತಿ - ಅಕ್ರಮ ಮರಳು ಗಣಿಗಾರಿಕೆ
ಜಿಲ್ಲೆಯಲ್ಲಿ ಫಿಲ್ಟರ್ ಮರಳು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ತೆರಳಿ ಟ್ರಾಕ್ಟರ್ ಜಪ್ತಿ ಮಾಡಿದ್ದಾರೆ.
ಕನಕಗಿರಿ ತಾಲೂಕಿನ ಬಸರಿಹಳ್ಳಿ ಗ್ರಾಮದ ಬಳಿ ಫಿಲ್ಟರ್ ಮರಳು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ನಿಷೇಧಿತ ಚಟುವಟಿಕೆಯಲ್ಲಿ ತೊಡಗಿದ್ದ ಟ್ರಾಕ್ಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಆಧಾರದ ಮೇಲೆ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಕುಷ್ಟಗಿ ತಾಲೂಕಿನ ಹನುಮಸಾಗರ ಬಳಿಯ ಬೆಟ್ಟದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿ ಅವುಗಳನ್ನು ಸಾಗಿಸುತ್ತಿದ್ದ ಟ್ರಾಕ್ಟರ್ ಅನ್ನು ವಶಕ್ಕೆ ಪಡೆಯಲಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ದಿಲೀಪ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಬಗ್ಗೆ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.