ಗಂಗಾವತಿ:ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಸಮೀಪ ಇರುವ ಕಂಪ್ಲಿ ಸೇತುವೆ ಬಳಿ ತುಂಗಭದ್ರಾ ನದಿಯಿಂದ ನಿತ್ಯ ನೂರಾರು ಎತ್ತಿನ ಬಂಡಿಗಳ ಮೂಲಕ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಜಂತಕಲ್ ಗ್ರಾಮದ ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಾಣಿಕೆ - ನದಿಯಿಂದ ಅಕ್ರಮವಾಗಿ ಮರಳು ಸಾಗಾಣಿಕೆ
ಎತ್ತಿನ ಬಂಡಿಗಳ ಮೂಲಕ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಸಮೀಪವಿರುವ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
![ಚಿಕ್ಕಜಂತಕಲ್ ಗ್ರಾಮದ ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಾಣಿಕೆ](https://etvbharatimages.akamaized.net/etvbharat/prod-images/768-512-5073366-thumbnail-3x2-gvt.jpg)
ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಾಣಿಕೆ
ಎತ್ತಿನ ಬಂಡಿಗಳ ಮೂಲಕ ನದಿಯಿಂದ ಮರಳು ಸಾಗಿಸಲಾಗುತ್ತಿದೆ. ಮರಳನ್ನು ಒಂದು ಕಡೆ ಸಂಗ್ರಹಿಸಿ ಅಲ್ಲಿಂದ ಟ್ರ್ಯಾಕ್ಟರ್ ಮೂಲಕ ನಗರ, ಪಟ್ಟಣ ಪ್ರದೇಶಕ್ಕೆ ಮರಳು ಕಳಿಸಲಾಗುತ್ತಿದೆ. ಕೆಲವೊಮ್ಮೆ ಟ್ರಕ್ಗಳ ಮೂಲಕ ದೂರದ ನಗರ ಪಟ್ಟಣಗಳಿಗೂ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.
ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಾಣಿಕೆ
ಸರ್ಕಾರಕ್ಕೆ ಯಾವುದೇ ತೆರಿಗೆ ಪಾವತಿಸದೇ ನಿತ್ಯ ನೂರಾರು ಟ್ರ್ಯಾಕ್ಟರ್ ಮರಳು ಕಳ್ಳತನದಿಂದ ಸಾಗಿಸಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಪಂಚಾಯಿತಿ ಗಮನ ಹರಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಅಕ್ರಮಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.