ಗಂಗಾವತಿ: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಮಳಿಗೆಯನ್ನು ಶಾಸಕ ಪರಣ್ಣ ಮುನವಳ್ಳಿ ಉದ್ಘಾಟಿಸಿದರು.
ಗಂಗಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಮಳಿಗೆ ಉದ್ಘಾಟನೆ - Inauguration of Janushadhi Shop at Koppal Gangavathi Government Hospital
ಕೊಪ್ಪಳ ಗಂಗಾವತಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಮಳಿಗೆಯನ್ನು ಶಾಸಕ ಪರಣ್ಣ ಮುನವಳ್ಳಿ ಉದ್ಘಾಟಿಸಿದರು.
ಬಳಿಕ ಮಾತನಾಡಿ, ರಾಜ್ಯದ 176 ತಾಲೂಕು ಕೇಂದ್ರಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಆರಂಭಿಸಲಾಗಿದೆ. ಇದೇ ಮೊದಲ ಬಾರಿಗೆ ಗಂಗಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಕೇಂದ್ರ ಆರಂಭಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಗುಣಮಟ್ಟದ ಚಿಕಿತ್ಸೆಯಿಂದಾಗಿ ನಿತ್ಯ ಸಾವಿರಾರು ರೋಗಿಗಳು ಇಲ್ಲಿಗೆ ಬರುತ್ತಾರೆ. ಅವರಿಗೆ ಕಡಿಮೆ ದರದ ಔಷಧಿಯಿಂದ ಅನುಕೂಲವಾಗಲಿ ಎನ್ನುವುದು ಸರ್ಕಾರದ ಆಶಯ ಎಂದರು.
ಜನರಿಗೆ ಅದರಲ್ಲೂ ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಔಷಧಿ ಸಿಗಬೇಕು ಎಂಬುವುದು ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಉದ್ದೇಶವಾಗಿತ್ತು. ಕೇಂದ್ರ ಸರ್ಕಾರದ ಈ ಯೋಜನೆಯಿಂದ ಜನರಿಗೆ ಮಾರುಕಟ್ಟೆಗಿಂತಲೂ ಕಡಿಮೆ ದರದಲ್ಲಿ ಔಷಧಿಗಳು ಸಿಗುತ್ತಿವೆ ಎಂದು ಹೇಳಿದರು.