ಕರ್ನಾಟಕ

karnataka

ETV Bharat / state

73ನೇ ಸ್ವಾತಂತ್ರ್ಯೋತ್ಸವ: ಕೊಪ್ಪಳದಲ್ಲಿ ಸಂಭ್ರಮ.. ಸಡಗರ - ಧ್ವಜಾರೋಹಣ

ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್​ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.

ಕೊಪ್ಪಳದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

By

Published : Aug 15, 2019, 11:49 AM IST

ಕೊಪ್ಪಳ: 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸಡಗರದಿಂದ ಆಚರಿಸಲಾಯಿತು.

ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್​ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಅಲಂಕೃತ ತೆರೆದ ವಾಹನದಲ್ಲಿ ಪರೇಡ್ ವೀಕ್ಷಿಸಿದರು. ಬಳಿಕ ಪೊಲೀಸ್, ಗೃಹರಕ್ಷಕದಳ, ಎನ್​ಸಿಸಿ, ಸ್ಕೌಟ್ಸ್, ಗೈಡ್ಸ್, ಸೇವಾದಳ ಸೇರಿದಂತೆ ಒಟ್ಟು 23 ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಕೊಪ್ಪಳದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಪಿ. ಸುನೀಲ್​ ಕುಮಾರ್ ಅವರು, ಬ್ರಿಟೀಷರ ದಾಸ್ಯದಿಂದ ಬಿಡುಗಡೆಗೊಂಡು 73 ವರ್ಷಗಳಾಗುತ್ತಿದೆ. ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸುವ ಭಾಗ್ಯ ನನ್ನದಾಗಿದ್ದು, ಇದು ನನ್ನ ಸೌಭಾಗ್ಯ. ಸ್ವಾತಂತ್ರ್ಯಕ್ಕಾಗಿ ದೇಶದ ಅಗಣಿತ ಮಹನೀಯರು ಹೋರಾಡಿದ್ದಾರೆ. ಅಂತಹ ಮಹನೀಯರನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ‌ ಸುಕುಮಾರ್, ಉಪವಿಭಾಗಾಧಿಕಾರಿ ಸಿ.ಡಿ. ಗೀತಾ, ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನಮೂರ್ತಿ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

ABOUT THE AUTHOR

...view details