ಕೊಪ್ಪಳ: ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಹಾಗೂ ಡಿಎಚ್ಒ ಅಲಕನಂದಾ, ಅಪರ ಜಿಲ್ಲಾಧಿಕಾರಿ ಎಂಪಿ ಮಾರುತಿ ಸ್ವತಃ ಕೊರೊನಾ ಲಸಿಕೆ ಪಡೆಯುವ ಮೂಲಕ ಎರಡನೇ ಹಂತದ ವ್ಯಾಕ್ಸಿನೇಷನ್ಗೆ ಚಾಲನೆ ನೀಡಿದರು.
ಕೊಪ್ಪಳದ 18 ಕೇಂದ್ರಗಳಲ್ಲಿ ಎರಡನೇ ಹಂತದ ವ್ಯಾಕ್ಸಿನೇಷನ್ ಆರಂಭ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಎಎನ್ಎಂ ಕೇಂದ್ರದಲ್ಲಿ ಎರಡನೇ ಹಂತದ ವ್ಯಾಕ್ಸಿನೇಷನ್ ಆರಂಭಗೊಂಡಿದ್ದು, ಲಸಿಕೆ ಪಡೆದ ಈ ಅಧಿಕಾರಿಗಳನ್ನು ಕೆಲಹೊತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನಿಗಾವಹಿಸಿ ಆರೋಗ್ಯ ತಪಾಸಣೆ ನಡೆಸಿದರು.
ಓದಿ:ಚುನಾಯಿತ ಎಂಎಲ್ಎ, ಎಂಎಲ್ಸಿ ವಿರುದ್ಧ ರಾಜ್ಯ ಬಿಜೆಪಿ ಕ್ರಮ ತೆಗೆದುಕೊಳ್ಳುವಂತಿಲ್ಲ: ಕೆ.ಎಸ್.ಈಶ್ವರಪ್ಪ
ಲಸಿಕೆ ಪಡೆದುಕೊಂಡ ಬಳಿಕ ಮಾತನಾಡಿದ ಡಿಸಿ ವಿಕಾಸ್ ಕಿಶೋರ್ ಸುರಳ್ಕರ್ ಹಾಗೂ ಎಸ್ಪಿ ಟಿ. ಶ್ರೀಧರ್ ಅವರು, ಜಿಲ್ಲೆಯ 18 ಕೇಂದ್ರಗಳಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಇಂದಿನಿಂದ 3 ದಿನಗಳ ಕಾಲ ನಡೆಯಲಿರುವ ವ್ಯಾಕ್ಸಿನೇಷನ್ನಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.