ಗಂಗಾವತಿ(ಕೊಪ್ಪಳ): ಶೃಂಗೇರಿಯಲ್ಲಿರುವ ಶಂಕರಾಚಾರ್ಯರ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಮಾಡಿದ ಅಪಮಾನ ಖಂಡಿಸಿ ನಗರದಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಮಾಜದ ಮುಖಂಡರು ಒತ್ತಾಯಿಸಿದರು.
ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ
ಶೃಂಗೇರಿಯಲ್ಲಿರುವ ಶಂಕರಾಚಾರ್ಯರ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಮಾಡಿದ ಅಪಮಾನ ಖಂಡಿಸಿ ನಗರದಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು.
ಶಂಕರರ ಪ್ರತಿಮೆಗೆ ಅವಮಾನ: ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ
ಇದಕ್ಕೂ ಮೊದಲು ಜಯನಗರದ ಶಾರದಾ ನಗರದಲ್ಲಿರುವ ಶೃಂಗೇರಿ ಶಾರದಾಂಬ ದೇಗುದಲ್ಲಿ ಸಭೆ ನಡೆಸಿದ ಸಮಾಜದ ಮುಖಂಡರು, ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಈ ಬಗ್ಗೆ ತೀವ್ರ ಹೋರಾಟ, ಪ್ರತಿಭಟನೆಯಾದರೆ ಮಾತ್ರ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುತ್ತದೆ ಎಂದರು.
ಬಳಿಕ ಆನೆಗೊಂದಿ ರಸ್ತೆಯಲ್ಲಿರುವ ಮಿನಿ ವಿಧಾನಸೌಧಕ್ಕೆ ತೆರಳಿದ ಸಮಾಜದ ಮುಖಂಡರು, ಸಾಂಕೇತಿಕ ಪ್ರತಿಭಟನೆ ನಡೆಸಿದರು. ಬಳಿಕ ಕಂದಾಯ ಇಲಾಖೆಯ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಆರೋಪಿಗಳ ಶಿಕ್ಷೆಗೆ ಒತ್ತಾಯಿಸಿದರು.