ಕರ್ನಾಟಕ

karnataka

ETV Bharat / state

ಗಂಗಾವತಿಯಲ್ಲಿ ಸುರೇಶ ಕುಮಾರ್ ವಿರುದ್ಧ ಪ್ರತಿಭಟನೆ - gangavathi news

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಅಂಬೇಂಡ್ಕರ್​​ಗೆ ಅವಹೇಳನ: ಗಂಗಾವತಿಯಲ್ಲಿ ಸುರೇಶ ಕುಮಾರ್ ವಿರುದ್ಧ ಪ್ರತಿಭಟನೆ

By

Published : Nov 15, 2019, 12:01 AM IST

ಗಂಗಾವತಿ:ಶಿಕ್ಷಣ ಸಚಿವ ಸುರೇಶ ಕುಮಾರ್​ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಕರ್ತವ್ಯಲೋಪ ಎಸಗಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಅಂಬೇಂಡ್ಕರ್​​ಗೆ ಅವಹೇಳನ: ಗಂಗಾವತಿಯಲ್ಲಿ ಸುರೇಶ ಕುಮಾರ್ ವಿರುದ್ಧ ಪ್ರತಿಭಟನೆ

ನಗರದ ಕೋರ್ಟ್ ಎದುರಿಗಿರುವ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು. ಸುರೇಶ ಕುಮಾರ್​ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ.

ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details