ಕೊಪ್ಪಳ:ಸಚಿವರು ಹಾಗೂ ಜೆಡಿಎಸ್ ಮುಖಂಡರ ಮೇಲೆ ಐಟಿ ರೇಡ್ ಮಾಡಿರೋದನ್ನು ಖಂಡಿಸಿ ಕೊಪ್ಪಳದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಐಟಿ ದಾಳಿ ಖಂಡಿಸಿ ಕೊಪ್ಪಳದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ - IT raid
ಜೆಡಿಎಸ್ನ ಸಚಿವರು ಶಾಸಕರ ಮನೆ ಮೇಲೆ ಐಟಿ ದಾಳಿ ನಡೆಸಿರುವುದನ್ನು ಖಂಡಿಸಿ ಕೊಪ್ಪಳ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಅಶೋಕ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿದರು. ಚೌಕಿದಾರ್ ಚೋರ್ ಹೈ ಎಂದು ಘೋಷಣೆ ಹಾಕುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಐಟಿ ದಾಳಿ ದುರುದ್ದೇಶದಿಂದ ಕೂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ್, ಕಾರ್ಯಾಧ್ಯಕ್ಷ ವೀರೇಶ್ ಎಂ. ಮಹಾಂತಯ್ಯನಮಠ, ಮುಖಂಡರಾದ ಸಿ.ಎಂ. ಹಿರೇಮಠ, ಮೌನೇಶ್ ವಡ್ಡಟ್ಟಿ, ವೆಂಕಟೇಶ್ ಬೆಲ್ಲದ್, ಮಂಜುಳಾ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.