ಕೊಪ್ಪಳ: ವಿದ್ಯುತ್ ತಂತಿ ಸ್ಪರ್ಶಿಸಿ ಹಸುವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಗುಂಡೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು - undefined
ಮಳೆ-ಗಾಳಿಗೆ ವಿದ್ಯುತ್ ಕಂಬವೊಂದು ನೆಲಕ್ಕುರುಳಿದ್ದು, ಹೊಲದಲ್ಲಿ ಮೇಯಲು ಹೋಗಿದ್ದ ಹಸು ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಸಾವನ್ನಪ್ಪಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು
ಗುಂಡೂರು ಗ್ರಾಮದ ಕೆ.ಬಸಪ್ಪ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಮಳೆ-ಗಾಳಿಗೆ ವಿದ್ಯುತ್ ಕಂಬವೊಂದು ನೆಲಕ್ಕುರುಳಿದೆ. ಹೀಗಿದ್ದರೂ ಅದರಲ್ಲಿ ವಿದ್ಯುತ್ ಪ್ರವಹಿಸುತ್ತಿತ್ತು. ಹೊಲದಲ್ಲಿ ಮೇಯಲು ಹೋಗಿದ್ದ ಹಸು ವಿದ್ಯುತ್ ತಂತಿ ತುಳಿದಿದ್ದು, ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಇನ್ನು ವಿದ್ಯುತ್ ಕಂಬ ಬಿದ್ದು ಒಂದು ದಿನವಾದರೂ ಜೆಸ್ಕಾಂ ಅಧಿಕಾರಿಗಳು ಸರಿಪಡಿದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.