ಕರ್ನಾಟಕ

karnataka

ETV Bharat / state

ಕೇಂದ್ರದ ಯೋಜನೆಗಳ ಮಾಹಿತಿ ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷರಿಗೆ ಅವಮಾನ ಆರೋಪ - ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷರಿಗೆ ಅವಮಾನ

ಕೊಪ್ಪಳ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ತುಂಗಭದ್ರಾ ಕಾಡಾ ಅಧ್ಯಕ್ಷರಿಗೆ ವೇದಿಕೆಯಲ್ಲಿ ಮಾತನಾಡಲು ಅವಕಾಶ ನೀಡದೇ, ಕೇಂದ್ರದ ಯೋಜನೆಗಳ ಬಗ್ಗೆ ಮಾತನಾಡಲು ತಡೆದು ಅಪಮಾನ ಮಾಡಿರುವ ಆರೋಪ ಕೇಳಿಬಂದಿದೆ.

Job Fair Opening Program
ಉದ್ಯೋಗ ಮೇಳ ಕಾರ್ಯಕ್ರಮ

By

Published : Mar 21, 2022, 8:01 PM IST

ಕೊಪ್ಪಳ:ಜಿಲ್ಲಾಡಳಿತದಿಂದ ಇಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ತುಂಗಭದ್ರಾ ಕಾಡಾ ಅಧ್ಯಕ್ಷರಿಗೆ ಅವಮಾನ ಮಾಡಲಾಗಿದೆ.

ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ

ಈ ಕುರಿತಂತೆ ಸಿಎಂಗೆ ಪತ್ರ ಬರೆಯುವುದಾಗಿ ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಹೇಳಿದ್ದಾರೆ. ಉದ್ಯೋಗ ಮೇಳದ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಗೌರವ ನೀಡದೆ ಅವಮಾನ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು.

ವೇದಿಕೆಯನ್ನು ಶಾಸಕರಿಗೆ ಮಾತ್ರ ಸೀಮಿತ ಮಾಡಲಾಗಿದೆ. ಈ ಮೂಲಕ ಕ್ಯಾಬಿನೆಟ್ ದರ್ಜೆಯ ಕಾಡಾ ಅಧ್ಯಕ್ಷರಿಗೆ ಅವಮಾನ ಮಾಡಲಾಗಿದೆ. ಕೇಂದ್ರ ಸರ್ಕಾರದ ಈ ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷರಿಗೆ ಅವಕಾಶ ನೀಡಿಲ್ಲ. ಜಿಲ್ಲಾಧಿಕಾರಿಗಳು ಅವಸರವಾಗಿ ಕಾರ್ಯಕ್ರಮ ಮುಗಿಸಿದರು ಎಂದು ಆರೋಪಿಸಿದರು.

ಇದನ್ನೂ ಓದಿ:'ನಾನು ಡಾಕ್ಟರ್ ಆಗಲೇಬೇಕು ಸರ್.. ನಮ್ಗೆ ಬೇರೆ ದಾರಿ ಇಲ್ಲ, ನೀವು ತೋರಿಸಿದ ಹಾದಿಯಲ್ಲಿ ನಡೆಯುತ್ತೇವೆ'

ABOUT THE AUTHOR

...view details