ಗಂಗಾವತಿ:ಇಂದಿನಿಂದ ದ್ವಿತೀಯ ಪಿಯುಸಿ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿನ 10ನೇ ತರಗತಿ ಪ್ರಾರಂಭವಾಗಿದ್ದು, ಶಿಕ್ಷಣ ಇಲಾಖೆಯ ಕಲಬುರಗಿ ಪ್ರಾದೇಶಿಕ ವಲಯದ ನಿರ್ದೇಶಕ ಡಾ.ಬಿ.ಕೆ.ಎಸ್.ವರ್ಧನ್ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆಗಳ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೈಗೊಂಡ ಪೂರ್ವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದ ವರ್ಧನ್, ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಮಾತನಾಡಿ, ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ. ಮಕ್ಕಳ ಕೈಗೆ ಸ್ಯಾನಿಟೈಸರ್ ಹಾಕಲಾಗುವುದು. ಮಾಸ್ಕ್ ಧರಿಸಲು ಹೇಳಲಾಗಿದೆ. ಸಾಮಾಜಿಕ ಅಂತರ ಕಾಪಾಡುವಂತೆ ಆಯಾ ಶಾಲೆಯ ಎಲ್ಲಾ ಮುಖ್ಯ ಶಿಕ್ಷಕರಿಗೆ ತಿಳಿಸಲಾಗಿದೆ. ಯಾವುದೇ ಮಕ್ಕಳಿಗೆ ಕೆಮ್ಮು, ಜ್ವರದಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಎಂದರು.
ಓದಿ:ಹೊಸ ವರ್ಷಕ್ಕೆ ದರ ಏರಿಕೆಯ ಬರೆ: ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ!