ಕರ್ನಾಟಕ

karnataka

ETV Bharat / state

ಕನಕಾಪುರ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣ: ಸಿಬಿಐಗೆ ವಹಿಸುವಂತೆ ಸಿಎಂಗೆ ಮನವಿ - ಕನಕಾಪುರ ವಿದ್ಯಾರ್ಥಿ ಕೊಲೆ ಪ್ರಕರಣ

2015 ಜನವರಿ 11ರಂದು ಕೊಪ್ಪಳ ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ವಿದ್ಯಾರ್ಥಿ ತಾಯಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣ

By

Published : Sep 14, 2019, 12:43 PM IST

ಕೊಪ್ಪಳ:ಕಳೆದ 2015ರಲ್ಲಿ ನಡೆದಿದ್ದ ಕನಕಾಪುರದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಯಲ್ಲಾಲಿಂಗನ ತಾಯಿ ಕೆಂಚಮ್ಮ, ಸಿಎಂ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಸಿಎಂ ಯಡಿಯೂರಪ್ಪ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಕೊಲೆಯಾದ ಯಲ್ಲಾಲಿಂಗನ ತಾಯಿ ಕೆಂಚಮ್ಮ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಸಲ್ಲಿಸಿದ್ದಾಳೆ.

ನೀವು ವಿರೋಧ ಪಕ್ಷದ ನಾಯಕರಾಗಿದ್ದಾಗ ನನ್ನ ಮಗನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಹೋರಾಟ ಮಾಡಿದ್ರಿ. ಈಗ ನೀವೆ ಸಿಎಂ ಆಗಿದ್ದೀರಿ. ಹೀಗಾಗಿ ನನ್ನ ಮಗನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೆಂಚಮ್ಮ ಮನವಿ ಮಾಡಿದ್ದಾಳೆ.

ಗ್ರಾಮ ಪಂಚಾಯತ್​ನಲ್ಲಿ ನಡೆದಿದ್ದ ಅವ್ಯವಹಾರ ಪ್ರಶ್ನೆ ಮಾಡಿದ್ದಕ್ಕೆ ಯಲ್ಲಾಲಿಂಗನ ಕೊಲೆ ನಡೆದಿತ್ತು. ಕೊಲೆ ಪ್ರಕರಣದಲ್ಲಿ ಮಾಜಿ ಸಚಿವರೊಬ್ಬರ ಆಪ್ತ ಹನುಮೇಶ್ ನಾಯಕ್ ಸೇರಿ 9 ಜನ ಬಂಧಿತರಾಗಿದ್ದರು. ಈಗ ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

For All Latest Updates

ABOUT THE AUTHOR

...view details