ಕರ್ನಾಟಕ

karnataka

ETV Bharat / state

ಕೊಪ್ಪಳ: ಉರುಳುಸೇವೆ ಮಾಡಿ ಪ್ರತಿಭಟನಾಕಾರರ ಆಕ್ರೋಶ - ಕೊಪ್ಪಳದಲ್ಲಿ ಬಂದ್​

ಬಂದ್​ ಹಿನ್ನೆಲೆಯಲ್ಲಿ ಇಂದು ಕಾರಟಗಿ ಪಟ್ಟಣದ ಕನಕದಾಸ ವೃತ್ತದಲ್ಲಿ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಬಳಿಕ ಉರುಳು ಸೇವೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Kannada organisations and farmers organisations protested in Koppal
ಉರುಳುಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು

By

Published : Dec 5, 2020, 1:11 PM IST

ಕೊಪ್ಪಳ:ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರೆ ನೀಡಲಾಗಿರುವ ಬಂದ್​ ಹಿನ್ನೆಲೆಯಲ್ಲಿ ಕಾರಟಗಿ ಪಟ್ಟಣದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಹಾಗೂ ರೈತಪರ ಸಂಘಟನೆಗಳ ಕಾರ್ಯಕರ್ತರು ಉರುಳು ಸೇವೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಉರುಳುಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು

ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ಕೊಪ್ಪಳ ನಗರದ ಬಸ್ ನಿಲ್ದಾಣದ ಬಳಿಯಿಂದ ಅಶೋಕ ಸರ್ಕಲ್​​ವರೆಗೆ ಪ್ರತಿಭಟನೆ ನಡೆಸಿ ಸರ್ಕಾರದ ನಡೆಯನ್ನು ಖಂಡಿಸಿದರು. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯಿದರು.

ಓದಿ :ಯಡಿಯೂರಪ್ಪ ಒಬ್ಬ ಹಿಟ್ಲರ್.. ಸಿಎಂ ವಿರುದ್ಧ ವಾಟಾಳ್ ನಾಗರಾಜ್ ಆಕ್ರೋಶ

ಇದಕ್ಕೂ ಮೊದಲು ನಗರದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರನ್ನು ನಗರದ ಬಸವೇಶ್ವರ ಸರ್ಕಲ್​​ನಲ್ಲಿ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು‌‌. ಪ್ರತಿಭಟನೆ ನಡೆದಿರೋದು ಬಿಟ್ಟರೆ ಜಿಲ್ಲೆಯಲ್ಲಿ ಬಂದ್​ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ABOUT THE AUTHOR

...view details