ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಅಕ್ಷರ ಜಾತ್ರೆ ಆರಂಭವಾಗಿದೆ.
ಕೊಪ್ಪಳದಲ್ಲಿ ರಂಗೇರಿದ ಅಕ್ಷರ ಜಾತ್ರೆ: ಅದ್ಧೂರಿ ಮೆರವಣಿಗೆ - kannada news
11ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಕೊಪ್ಪಳದ ಬನ್ನಿಕೊಪ್ಪ ಗ್ರಾಮದಲ್ಲಿ ಆರಂಭಗೊಂಡಿದ್ದು, ಸಮ್ಮೇಳನ ಆರಂಭಕ್ಕೂ ಮುನ್ನ ಗ್ರಾಮದಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು
ಸಮ್ಮೇಳನದ ಸರ್ವಾಧ್ಯಕ್ಷರನ್ನು ಮೆರವಣಿಗೆ ಮೂಲಕ ಕರೆತರಲಾಯಿತು
11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಸಾಹಿತಿ ಟಿ.ವಿ. ಮಾಗಳದ ಅವರನ್ನು ಮೆರವಣಿಗೆ ಮೂಲಕ ಸಮ್ಮೇಳನ ನಗರಕ್ಕೆ ಕರೆತರಲಾಯಿತು.
ಮೆರವಣಿಗೆಯಲ್ಲಿ ಕರಡಿಮಜಲು, ನಂದಿಕೋಲು ಕುಣಿತ, ಕುಂಭಹೊತ್ತ ಮಹಿಳೆಯರು, ಲಂಬಾಣಿ ಮಹಿಳೆಯರ ನೃತ್ಯ ಗಮನ ಸೆಳೆಯಿತು. ಶಾಲಾ ಮಕ್ಕಳು ವಿವಿಧ ನಾಯಕರ ವೇಷಭೂಷಣ ತೊಟ್ಟು ಹಿರಿಯ ಸಾಹಿತಿಗಳ ಭಾವಚಿತ್ರ ಹಿಡಿದು ಮೆರವಣಿಗೆಯಲ್ಲಿ ಸಾಗಿದರು.