ಗಂಗಾವತಿ: ಕೊರೊನಾ ಪಾಸಿಟಿವ್ ಬಂದ ಏರಿಯಾಗಳಲ್ಲಿ ಅಧಿಕಾರಿಗಳು ಕಾಟಾಚಾರಕ್ಕೆ ಸೀಲ್ ಡೌನ್ ಮಾಡುತ್ತಿದ್ದು, ಎಂದಿನಂತೆ ಬಹುತೇಕ ಎಲ್ಲಾ ಚಟುವಟಿಕೆಗಳು ನಡೆಯುತ್ತಿವೆ. ಈ ಹಿನ್ನೆಲೆ ಇಡೀ ಕೊಪ್ಪಳ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಲಾಕ್ಡೌನ್ ಜಾರಿ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮುಖಂಡರು ಆಗ್ರಹಿಸಿದ್ದಾರೆ.
ಕೊಪ್ಪಳ ಜಿಲ್ಲೆ ಸಂಪೂರ್ಣ ಲಾಕ್ಡೌನ್ಗೆ ಕರವೇ ಆಗ್ರಹ - Karnataka Rakshana vedike Appeal
ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಇಡೀ ಜಿಲ್ಲೆಯನ್ನು ಕೆಲ ದಿನಗಳ ಕಾಲ ಲಾಕ್ಡೌನ್ ಮಾಡಬೇಕು ಎಂದು ಕರವೇ ಮುಖಂಡರು ಆಗ್ರಹಿಸಿದ್ದಾರೆ.
ಸಂಘಟನೆಯ ತಾಲೂಕು ಅಧ್ಯಕ್ಷ ಪಂಪಣ್ಣ ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಮುಖಂಡರು, ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ತಪ್ಪಿದ್ದು, ಜನ ಆತಂಕ್ಕೀಡಾಗಿದ್ದಾರೆ. ಅದರಲ್ಲೂ ಗಂಗಾವತಿಯಲ್ಲಿ ಮಿತಿ ಮೀರಿದ ಪ್ರಮಾಣದಲ್ಲಿ ಪಾಸಿಟಿವ್ ಕೇಸುಗಳು ನಮೂದಾಗುತ್ತಿವೆ. ಕೊರೊನಾ ಪಾಸಿಟಿವ್ ಬಂದ ಪ್ರದೇಶದಲ್ಲಿ ಕಾಟಾಚಾರಕ್ಕೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.
ಹೀಗಾಗಿ ಸೀಲ್ ಡೌನ್ ಏರಿಯಾದಲ್ಲಿ ಮದ್ಯ, ಮಾಂಸ ಸೇರದಂತೆ ಪ್ರತಿಯೊಂದು ವಹಿವಾಟು ನಡೆಯುತ್ತಿದೆ. ಜಿಲ್ಲೆಯ ಜನರ ಹಿತದೃಷ್ಟಿಯಿಂದ ಕೆಲ ದಿನಗಳ ಕಾಲ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.