ಕುಷ್ಟಗಿ (ಕೊಪ್ಪಳ): ಕುಷ್ಟಗಿ ತಾಲೂಕಿನ ಮೀಯಾಪುರ ಗ್ರಾಮದಲ್ಲಿ ಮೂರು ವರ್ಷದ ಮಗು ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ದೇವಾಲಯ ಅಶುದ್ಧಗೊಂಡಿದೆ ಎಂದು ಪಾಲಕರಿಗೆ ದಂಡ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದೆ.
ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ನೆಹರು ಓಲೇಕಾರ ಅವರು, ಸದರಿ ಆಯೋಗದ ಕಾರ್ಯದರ್ಶಿ ಮೂಲಕ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್, ಕೊಪ್ಪಳ ಜಿಲ್ಲಾ ವರಿಷ್ಠಾಧಿಕಾರಿ ಟಿ.ಶ್ರೀಧರ ಅವರಿಗೆ ಕುಷ್ಟಗಿ ತಾಲೂಕಿನ ಮೀಯಾಪುರ ಗ್ರಾಮದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿದ ಹಿನ್ನೆಲೆಯಲ್ಲಿ 25 ಸಾವಿರ ರೂ. ದಂಡ ವಿಧಿಸಿರುವ ಅವಮಾನವೀಯ ಕೃತ್ಯದ ಕುರಿತು ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.