ಕರ್ನಾಟಕ

karnataka

ETV Bharat / state

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ಅನುಮತಿ ನೀಡಬೇಕು: ಶೇಖರಗೌಡ ಮಾಲಿಪಾಟೀಲ ಒತ್ತಾಯ - ಕೊಪ್ಪಳ ಸುದ್ದಿ

ಹಾವೇರಿಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ಮುಂದೆ ಬರಬೇಕು. ಕೊರೊನಾ ಮಾರ್ಗಸೂಚಿಗಳನ್ನು ಕೈಗೊಂಡು ಸಮ್ಮೇಳನ ನಡೆಸಲು ಅನುಮತಿ ನೀಡುವಂತೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಪರ್ಧಾಕಾಂಕ್ಷಿ ಶೇಖರಗೌಡ ಮಾಲಿಪಾಟೀಲ ಒತ್ತಾಯಿಸಿದ್ದಾರೆ.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಪರ್ಧಾಕಾಂಕ್ಷಿ ಶೇಖರಗೌಡ ಮಾಲಿಪಾಟೀಲ
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಪರ್ಧಾಕಾಂಕ್ಷಿ ಶೇಖರಗೌಡ ಮಾಲಿಪಾಟೀಲ

By

Published : Nov 23, 2020, 10:25 PM IST

ಕುಷ್ಟಗಿ (ಕೊಪ್ಪಳ):ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ವಿಚಾರವಾಗಿ ಸಾಹಿತಿಗಳು, ಸಾಹಿತ್ಯಾಸಕ್ತರು ನಿರೀಕ್ಷೆ ಇಟ್ಟಿದ್ದು, ಇದಕ್ಕೆ ಕೊರೊನಾ ತಣ್ಣೀರೆರಚಿದೆ. ಕೋವಿಡ್ ನಿಯಂತ್ರಣದ ಮಾರ್ಗಸೂಚಿ, ನಿಬಂಧನೆಗಳು ನಮ್ಮನ್ನೆಲ್ಲಾ ಕಟ್ಟಿಹಾಕಿವೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಪರ್ಧಾಕಾಂಕ್ಷಿ ಶೇಖರಗೌಡ ಮಾಲಿಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಹಾವೇರಿ ಸಮ್ಮೇಳನದ ಬಗ್ಗೆ ಸಾಹಿತ್ಯಾಸಕ್ತರು, ಸಾಹಿತಿಗಳು, ಕಲಾವಿದರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾಧಕ ಬಾಧಕ ನೋಡಿಕೊಂಡು ಸಮಯೋಚಿತವಾದ ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಹಾವೇರಿ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸಭೆ ಮಾಡಿದ್ದಾರೆ. ಸಮ್ಮೇಳನ ನೆರವೇರಿಸುವ ಉತ್ಸುಕಕ್ಕೆ ಕೊರೊನಾ ಅಡ್ಡಿಯಾಗಿದೆಯೇ ವಿನಾ ಅನೇಕಾನೇಕ ಸಾಹಿತ್ಯಾಕ್ತರು, ಕಲಾವಿದರಿಂದ ಸಮ್ಮೇಳನ ನೆರವೇರಲಿ ಎನ್ನುವ ಆಶಯ ವ್ಯಕ್ತವಾಗಿರುವುದು ತಿಳಿದು ಬಂದಿದೆ ಎಂದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಪರ್ಧಾಕಾಂಕ್ಷಿ ಶೇಖರಗೌಡ ಮಾಲಿಪಾಟೀಲ

ಸರ್ಕಾರ ಎಲ್ಲಾ ಕಾರ್ಯಕ್ರಮ, ಸಮಾರಂಭಕ್ಕೆ ಕೋವಿಡ್ ಮಾರ್ಗಸೂಚಿ ನಿಬಂಧನೆ ಹಾಕುತ್ತಿದೆ. ಅದೇ ರೀತಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ನಿಯಮ ಹೇರಿದರೆ ಮುಜುಗುರಕ್ಕೀಡಾಗಬಹುದು. ಈ ಹಿನ್ನೆಲೆಯಲ್ಲಿ ಸರ್ಕಾರ ಯೋಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕಿದೆ. ಸರ್ಕಾರ ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿರುವುದಾಗಿ ಹೇಳಿದರು.

ABOUT THE AUTHOR

...view details