ಕೊಪ್ಪಳ:ನಗರದ ಜಿಲ್ಲಾಡಳಿತ ಪಂಚಾಯತ್ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಕೊಪ್ಪಳ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಲಕ್ಷ್ಮಣ ಸವದಿ ತರಾಟೆ.. ಯಾಕಂತೀರಾ.. - ಭಮ್ರೆಯಿಂದ ಹೊರಬನ್ನಿ ಎಂದು ಅಧಿಕಾರಿಗಳಿಗೆ ತಿಳುವಳಿಕೆ ಪಾಠ
ಕೊಪ್ಪಳ ನಗರದ ಜಿಲ್ಲಾಡಳಿತ ಪಂಚಾಯತ್ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಸಭೆಗೆ ಬಂದಿದ್ದ ಕೆಲ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದ ಕಾರಣ ಡಿಸಿಎಂ ಸವದಿ ಗರಂ ಆದರು. ಇನ್ನು, ಡಿಹೆಚ್‌ಒ ಸಭೆಗೆ ಗೈರಾಗಿದ್ದಕ್ಕೆ ಖಡಕ್ ಆಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಹಾಜರಿದ್ದ ಶಾಸಕರು ಡಿಹೆಚ್‌ಒ ಡಾ. ರಾಜಕುಮಾರ್ ಬಗ್ಗೆ ಸಾಕಷ್ಟು ದೂರು ಹೇಳಿದರು. ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿಯೇ ಒತ್ತಾಯಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿ ಪಿ. ಸುನೀಲಕುಮಾರ್ , ಡಿಹೆಚ್ಒ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಸವದಿಯವರಿಗೆ ವಿವರಿಸಿದರು.
ಇನ್ನು, ಮಳೆ ಮಾಪನದ ಸಮಸ್ಯೆ ಬಗ್ಗೆ ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪೂರ ಸಭೆಯಲ್ಲಿ ಪ್ರಸ್ತಾಪಿಸಿದಾಗ ಅಧಿಕಾರಿಗಳಿಂದ ಸರಿಯಾದ ಉತ್ತರ ಬರಲಿಲ್ಲ. ಈ ಸಂದರ್ಭದಲ್ಲಿ ಗರಂ ಆದ ಡಿಸಿಎಂ ಸವದಿ, ಶಾಸಕರು ಪತ್ರ ಬರೆದಿದ್ದರೂ ಅಧಿಕಾರಿಗಳು ಏನೂ ಕ್ರಮ ಕೈಗೊಂಡಿಲ್ಲ ಯಾಕೆ ಎಂದು ಕೃಷಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.