ರಾಯಚೂರು:ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು, ಶಾಸಕರು ಹಾಗೂ ಸಂಸದರು, ಸ್ಥಾಯಿ ಸಮಿತಿಯ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಸಭೆಯಲ್ಲಿ ನೆರೆ ಸಂತ್ರಸ್ತರಿಗೆ ಸೂರು ಕಲ್ಪಿಸುವ ವಿಚಾರದಲ್ಲಿ ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಮಾತನಾಡುತ್ತಿದ್ದರು. ಈ ವೇಳೆ, ಸ್ವಲ್ಪ ಕುಳಿತುಕೊಳ್ಳಿ ಎಂದು ಶಾಸಕ ವೆಂಕಟರಾವ್ ನಾಡಗೌಡ ಹೇಳಿದರು.
ಇದಕ್ಕೆ ಸಿಡಿಮಿಡಿಗೊಂಡ ದದ್ದಲ್, ನಮ್ಮನ್ನು ಸುಮ್ಮನೆ ಕುಳಿತುಕೊಳ್ಳಲು ಜನರು ಚುನಾಯಿಸಿ ಕಳುಹಿಸಲ್ಲ ಎಂದು ಹೇಳಿದ್ರು, ಅದನ್ನ ಕುಳಿತುಕೊಳ್ಳಿ ಮಾತನಾಡಿ ಅಂದ್ರೆ, ಅಲ್ರಿ ಕೆಡಿಪಿ ಸಭೆಯಲ್ಲಿ ಜನಪ್ರತಿನಿಧಿಗಳು ಸಮಸ್ಯೆಗಳ ಬಗ್ಗೆ ಮಾತನಾಡಲಿಲ್ಲ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು. ಇದರಿಂದೆ ಕೆಲಕಾಲ ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಬಳಿಕ ಸಚಿವ ಶ್ರೀರಾಮ ಸಮಾಧಾನ ಪಡಿಸಿದ್ರು.