ಕೊಪ್ಪಳ:ಕೇಸೂರು ಗ್ರಾಮದ ವೀರಭದ್ರಯ್ಯ ಸರಗಣಚಾರ ಎಂಬುವವರ ಮನೆಗೆ ನುಗ್ಗಿ ಹಣ, ಚಿನ್ನಾಭರಣ ದೋಚಿದ್ದ ಇಬ್ಬರು ಖದೀಮರನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದಾರೆ. ಕುಷ್ಟಗಿ ತಾಲೂಕಿನ ಜಾಲಿಹಾಳ ಗ್ರಾಮದ ಯಲ್ಲಪ್ಪ ಪೂಜಾರ ಹಾಗೂ ಹುಲಿಗೆಮ್ಮ ಪೂಜಾರಿ ಬಂಧಿತರು.
ಕೇಸೂರು ಗ್ರಾಮದ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ - ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮ
ಜಿಲ್ಲೆಯ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಷ್ಟಗಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕೇಸೂರು ಗ್ರಾಮದ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಪಿ ಯಲ್ಲಪ್ಪ ಮನೆಗೆ ಕನ್ನ ಹಾಕಿ ನಗ ನಾಣ್ಯ ದೋಚಿಕೊಂಡು ಪರಾರಿಯಾಗಿದ್ದ. ಬಳಿ ಕದ್ದಿದ್ದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳನ್ನು ಜಾಲಿಹಾಳದ ಹುಲಿಗೆಮ್ಮನಿಗೆ ಮಾರಾಟ ಮಾಡಿದ್ದ. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಖಚಿತ ಮಾಹಿತಿ ಆಧರಿಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 65 ಗ್ರಾಂ ಚಿನ್ನ, 200 ಗ್ರಾಂ. ಬೆಳ್ಳಿ ಜಪ್ತಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು.