ಕೊಪ್ಪಳ:ಜಿಲ್ಲೆಯಲ್ಲಿ ಇಂದು 113 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 9334 ಕ್ಕೆ ಏರಿಕೆಯಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಇಂದು 113 ಪಾಸಿಟಿವ್ ಪ್ರಕರಣಗಳು ಪತ್ತೆ ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 58, ಕೊಪ್ಪಳ ತಾಲೂಕಿನಲ್ಲಿ 32, ಕುಷ್ಟಗಿ ತಾಲೂಕಿನಲ್ಲಿ 13 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 10 ಪ್ರಕರಣ ಸೇರಿ ಇಂದು ಒಟ್ಟು 113 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ ಸೋಂಕಿನಿಂದ ಒಟ್ಟು 214 ಜನ ಮೃತಪಟ್ಟಿದ್ದಾರೆ. ಇಂದು 200 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 7426 ಜನರು ಗುಣಮುಖರಾಗಿದ್ದಾರೆ.
ಇನ್ನೂ 1425 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.