ಕರ್ನಾಟಕ

karnataka

ETV Bharat / state

ಕೊಪ್ಪಳ: 80 ಪಾಸಿಟಿವ್ ಪ್ರಕರಣ ಪತ್ತೆ.. ಇಬ್ಬರು ಸೋಂಕಿಗೆ ಬಲಿ

ಕೊಪ್ಪಳ ಜಿಲ್ಲೆಯಲ್ಲಿ ಇಂದು 80 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು 159 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 260 ಜನ ಮೃತಪಟ್ಟಿದ್ದಾರೆ.

ಕೊಪ್ಪಳ
ಕೊಪ್ಪಳ

By

Published : Oct 9, 2020, 8:11 PM IST

ಕೊಪ್ಪಳ:ಜಿಲ್ಲೆಯಲ್ಲಿ ಇಂದು 80 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12379ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ-19, ಕೊಪ್ಪಳ ತಾಲೂಕಿನಲ್ಲಿ 45, ಕುಷ್ಟಗಿ ತಾಲೂಕಿನಲ್ಲಿ 12 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 04 ಪ್ರಕರಣ ಸೇರಿ ಇಂದು ಒಟ್ಟು 80 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದಿದ್ದಾರೆ.

ಮೀಡಿಯಾ ಬುಲೆಟಿನ್​

ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 260 ಜನ ಮೃತಪಟ್ಟಿದ್ದಾರೆ. ಇಂದು 159 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 11007 ಜನರು ಗುಣಮುಖರಾಗಿದ್ದಾರೆ. 968 ಜನ ಸೋಂಕಿತರನ್ನು ಹೋಮ್ ಐಸೋಲೇಷನ್‌ ಮಾಡಲಾಗಿದೆ.

ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ABOUT THE AUTHOR

...view details