ಕರ್ನಾಟಕ

karnataka

ETV Bharat / state

ಕೊಪ್ಪಳ: ಬೋನಿಗೆ ಬಿದ್ದ ಚಿತರೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - ಬೋನಿಗೆ ಬಿದ್ದ ಚಿರತೆ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗಾವರಾಳ ಗ್ರಾಮದ ಹೊರವಲಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.

a leopard trapped in the cage
ಬೋನಿಗೆ ಬಿದ್ದ ಚಿತರೆ

By

Published : Sep 3, 2020, 3:59 PM IST

ಕೊಪ್ಪಳ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಗಾವರಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

ಸೆರೆ ಸಿಕ್ಕಿರುವ ಚಿರತೆ ಸುಮಾರು ಐದು ವರ್ಷ ಪ್ರಾಯದ್ದು ಎಂದು ಅಂದಾಜಿಸಲಾಗಿದೆ. ಕಳೆದೊಂದು ತಿಂಗಳಿನಿಂದ ಗಾವರಾಳ ಸುತ್ತಮುತ್ತ ಈ ಚಿರತೆಯು ನಾಯಿ, ಕುರಿ, ಕೋತಿಗಳ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಾವರಾಳ ಗ್ರಾಮದ ಹೊರವಲಯದಲ್ಲಿ ಎರಡು ಕಡೆ ಬೋನು ಇರಿಸಿದ್ದರು. ಚಿರತೆ ಬೋನಿನಲ್ಲಿ ಸೆರೆಯಾಗಿರುವ ವಿಷಯ ತಿಳಿದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ABOUT THE AUTHOR

...view details