ಕೊಪ್ಪಳ: ಸಂಸದ ಸಂಗಣ್ಣ ಕರಡಿ ಅವರಿಗೂ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಇಂದು ಅವರೇ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ.
ಕೊಪ್ಪಳ ಸಂಸದ ಸಂಗಣ್ಣ ಕರಡಿಗೂ ಕೊರೊನಾ ಪಾಸಿಟಿವ್..! - Koppal BJP MP Karadi Sanganna
ಕೊಪ್ಪಳ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಮೂಲಕ ಅವರು ಖಚಿತಪಡಿಸಿದ್ದಾರೆ.
ಕೊಪ್ಪಳ ಬಿಜೆಪಿ ಸಂಸದ ಕರಡಿ ಸಂಗಣ್ಣ
ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಈವರೆಗೆ ತಮ್ಮನ್ನು ಭೇಟಿಯಾದ ಕಾರ್ಯಕರ್ತರು, ಮುಖಂಡರಿಗೆ ಕೊರೊನಾ ಲಕ್ಷಣಗಳೆನಾದರೂ ಕಂಡು ಬಂದರೆ ತಕ್ಷಣವೇ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಅವರು ಮಾಡಿದ್ದಾರೆ. ಅಲ್ಲದೆ ಕ್ಷೇತ್ರದ ಜನರು ಏನಾದರೂ ತುರ್ತು ಕೆಲಸಗಳಿದ್ದರೆ ತಮ್ಮ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸುವಂತೆ ತಿಳಿಸಿದ್ದಾರೆ.