ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ 550 ಹೊಸ ಕೋವಿಡ್ ಕೇಸ್: ಮೂವರು ಸೋಂಕಿತರು ಸಾವು

ಕೊಪ್ಪಳದಲ್ಲಿ ಪ್ರತಿನಿತ್ಯ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದೆ. ಅದೇ ರೀತಿ ಗುಣಮುಖರಾದವರ ಸಂಖ್ಯೆಯಲ್ಲೂ ಇಳಿಕೆ ಕಂಡಿದೆ.

Koppal Covid cases Update
ಕೊಪ್ಪಳ ಕೋವಿಡ್ ಕೇಸ್

By

Published : May 27, 2021, 9:38 AM IST

ಕೊಪ್ಪಳ: ಜಿಲ್ಲೆಯಲ್ಲಿ ಹೊಸದಾಗಿ 550 ಕೋವಿಡ್​ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ ಮತ್ತು 546 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೊಪ್ಪಳ ತಾಲೂಕಿನಲ್ಲಿ 152, ಗಂಗಾವತಿ 343 ಹಾಗೂ ಯಲಬುರ್ಗಾ ತಾಲೂಕಿನ 55 ಪ್ರಕರಣ ಸೇರಿ ಒಟ್ಟು 550 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 29,655 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 479 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 25,389 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್

ಓದಿ : ಸವದತ್ತಿಯಲ್ಲಿ 15 ದಿನಗಳ ಅಂತರದಲ್ಲಿ ಮೂವರು ಸಹೋದರರು ಕೋವಿಡ್​ಗೆ ಬಲಿ

ಪ್ರಸ್ತುತ ಜಿಲ್ಲೆಯಲ್ಲಿ 3,787 ಸಕ್ರಿಯ ಪ್ರಕರಣಗಳಿದ್ದು, 2,665 ಮಂದಿ ಸೋಂಕಿತರು ಹೋಂ ಐಸೋಲೇಷನ್​ನಲ್ಲಿದ್ದಾರೆ. 1,122 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿತರು ಹೆಚ್ಚಳ, ಸಾವಿನ ಸಂಖ್ಯೆ ಇಳಿಕೆ:

ಮೇ 25ರಂದು ಜಿಲ್ಲೆಯಲ್ಲಿ308 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಒಟ್ಟು ನಾಲ್ವರು ಸೋಂಕಿತರು ಮೃತಪಟ್ಟಿದ್ದರು. ಮೇ 26ರಂದು ಹೊಸ ಪ್ರಕರಣಗಳ ಸಂಖ್ಯೆ 550 ಆಗಿದ್ದು, 242 ಪ್ರಕರಣಗಳು ಹೆಚ್ಚಳವಾಗಿವೆ. ಮೃತಪಟ್ಟವರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ.

ABOUT THE AUTHOR

...view details