ಕೊಪ್ಪಳ: ಜಿಲ್ಲೆಯಲ್ಲಿ 79 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು , ಸೋಂಕಿತರ ಸಂಖ್ಯೆ 1046 ಕ್ಕೆ ಏರಿಕೆಯಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ 79 ಕೋವಿಡ್ ಪ್ರಕರಣಗಳು ಪತ್ತೆ - coronavirus symptoms
ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 23 ಜನರು ಸಾವನ್ನಪ್ಪಿದ್ದಾರೆ. 50 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ , ಗಂಗಾವತಿ ತಾಲೂಕಿನಲ್ಲಿ 47, ಕೊಪ್ಪಳ ತಾಲೂಕಿನಲ್ಲಿ 10, ಕುಷ್ಟಗಿ ತಾಲೂಕಿನಲ್ಲಿ 13 ಹಾಗೂ ಯಲಬುರ್ಗಾ ತಾಲೂಕಿನಲ್ಲಿ -9 ಪ್ರಕರಣ ಸೇರಿ ಇಂದು ಒಟ್ಟು 79 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 23 ಜನರು ಸಾವನ್ನಪ್ಪಿದ್ದಾರೆ. 50 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 644 ಜನರು ಗುಣಮುಖರಾಗಿದ್ದಾರೆ. 116 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನು ಉಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.