ಕೊಪ್ಪಳ: ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಜನರನ್ನು ಮನವೊಲಿಸಲು ಕೊಪ್ಪಳ ಜಿಲ್ಲಾಡಳಿತ ವಿನೂತನ ಪ್ರಯತ್ನ ಮಾಡಿದ್ದು, ಗಮನ ಸೆಳೆಯುತ್ತಿದೆ.
ಜಾಂಜ್ ಮೇಳದಲ್ಲಿ ತೆರಳಿ ಜನರಿಗೆ ಕೋವಿಡ್ ಲಸಿಕೆ: ಕೊಪ್ಪಳ ಜಿಲ್ಲಾಡಳಿತದ ವಿನೂತನ ಪ್ರಯತ್ನ - covid vaccination camp
ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಜನರ ಮನವೊಲಿಸುವ ಹಲವಾರು ಪ್ರಯತ್ನಗಳು ನಡೆಯುತ್ತಲೇ ಇವೆ. ಇದೀಗ ಕೊಪ್ಪಳದಲ್ಲಿ ಜಾಂಜ್ ಮೇಳದೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ತೆರಳಿ, ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಜನರ ಮನವೊಲಿಸಿ, ಲಸಿಕೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
ಜಾಂಜ್ ಮೇಳದೊಂದಿಗೆ ತೆರಳಿ ಲಸಿಕೆ ನೀಡುತ್ತಿರುವ ಸಿಬ್ಬಂದಿ
ಕೊರೊನಾ ಲಸಿಕೆ ಹಾಕಲು ಜಿಲ್ಲಾಡಳಿತ ಜಾಂಜ್ ಮೇಳದ ವ್ಯವಸ್ಥೆ ಮಾಡಿದೆ. ಈ ಜಾಂಜ್ ಮೇಳದೊಂದಿಗೆ ಆರೋಗ್ಯ ಸಿಬ್ಬಂದಿ ಜನರ ಮನೆ-ಮನೆಗೆ ತೆರಳಿ ಅವರ ಮನವೊಲಿಸಿ ಲಸಿಕೆ ಹಾಕುತ್ತಿದ್ದಾರೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಮಲಕನಮರಡಿ ಗ್ರಾಮದಲ್ಲಿ ಲಸಿಕೆ ಹಾಕಿಸಿಕೊಳಲು ಜನರು ಹಿಂದೇಟು ಹಾಕುತ್ತಿದ್ದರು. ಹೀಗಾಗಿ ಜಿಲ್ಲಾಡಳಿತ ಈ ಪ್ಲಾನ್ ಮಾಡಿದ್ದು, ವಿಶಿಷ್ಟ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.