ಕರ್ನಾಟಕ

karnataka

ETV Bharat / state

ವ್ಯಕ್ತಿಯಿಂದ ಸುಲಿಗೆ ಮಾಡಿದವರಿಗೆ 2 ವರ್ಷ ಕಾರಾಗೃಹ ಶಿಕ್ಷೆ: ಜಿಲ್ಲಾ ನ್ಯಾಯಾಲಯ ಆದೇಶ - Koppal District court

ಕೊಪ್ಪಳದ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸಿಜೆಎಂ ನ್ಯಾಯಾಧೀಶರಾದ ಕುಮಾರ್.ಎಸ್ ಅವರು, ದರೋಡೆ ಮಾಡಿದ ಆರೋಪಿಗಳಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ಐದು ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಮಾಡಿದ್ದಾರೆ.

Koppal District court
ಜಿಲ್ಲಾ ನ್ಯಾಯಾಲಯದ ಆದೇಶ

By

Published : Mar 19, 2021, 7:32 PM IST

ಕೊಪ್ಪಳ: ವ್ಯಕ್ತಿಯಿಂದ ಮೊಬೈಲ್ ಹಾಗೂ ಹಣ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ, ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ಐದು ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಮಾಡಿದೆ.

2020 ಫೆಬ್ರವರಿ 1 ರಂದು ನಗರದ ಈಶ್ವರ ದೇವಸ್ಥಾನದ ಪಾರ್ಕ್‌ನಲ್ಲಿ ಇನಾಯತ್ ಎಂಬುವವರಿಗೆ ಬುಲಾಬಶಾವಲಿ ಹಾಗೂ ಮಹ್ಮದ ರಫಿ ಎಂಬಿಬ್ಬರು ಚಾಕು ತೋರಿಸಿ ಹೆದರಿಸಿ 2 ಸಾವಿರ ರೂಪಾಯಿ ನಗದು ಹಾಗೂ ಒಂದು ಸಾವಿರ ರೂಪಾಯಿ ಬೆಲೆಬಾಳುವ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು‌.

ಇದನ್ನೂ ಓದಿ: ಸಹೋದರನ ಅಂತ್ಯಕ್ರಿಯೆ ನೆರವೇರಿಸಿ ಮನೆಗೆ ಬಂದ ಅಣ್ಣನೂ ಕೊನೆಯುಸಿರು!

ಈ ಕುರಿತಂತೆ ಕೊಪ್ಪಳ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಅಂದಿನ ನಗರ ಠಾಣೆಯ ಪಿಐ ಮೌನೇಶ್ವರ ಮಾಲೀಪಾಟೀಲ್, ಆರೋಪಿಗಳಿಬ್ಬರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದ ವಿಚಾರಣೆಯಲ್ಲಿ ಆರೋಪಿಗಳಿಬ್ಬರ ಮೇಲೆ ಆರೋಪ ಸಾಬೀತಾಗಿದ್ದು ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಜಿ.ಎಸ್. ಪಾಟೀಲ್ ಅವರು ವಾದ ಮಂಡಿಸಿದ್ದರು.

ABOUT THE AUTHOR

...view details