ಕರ್ನಾಟಕ

karnataka

ಕೊಪ್ಪಳದಲ್ಲಿಂದು 141 ಸೋಂಕಿತರು ಪತ್ತೆ, 44 ಜನರು ಗುಣಮುಖ

ಇಂದು ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 19 ಜನರು ಸಾವನ್ನಪ್ಪಿದ್ದಾರೆ. 44 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 594 ಜನರು ಗುಣಮುಖರಾಗಿದ್ದಾರೆ.

By

Published : Jul 27, 2020, 10:16 PM IST

Published : Jul 27, 2020, 10:16 PM IST

ಕೊಪ್ಪಳ
ಕೊಪ್ಪಳ

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಮತ್ತೆ 141 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 879 ಕ್ಕೆ ಏರಿಕೆಯಾಗಿದೆ. ಈ ಕುರಿತು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದರು.

ಕೊಪ್ಪಳದ ಇವತ್ತಿನ ಕೋವಿಡ್ ರಿಪೋರ್ಟ್

ಗಂಗಾವತಿ ತಾಲೂಕಿನಲ್ಲಿ- 121, ಕೊಪ್ಪಳ ತಾಲೂಕಿನಲ್ಲಿ -15, ಕುಷ್ಟಗಿ ತಾಲೂಕಿನಲ್ಲಿ 4 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 1 ಸೇರಿ ಇಂದು ಒಟ್ಟು 141 ಜನರಿಗೆ ಕೊರೊನಾ ವಕ್ಕರಿಸಿದೆ.

ಇಂದು ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 19 ಜನರು ಮೃತಪಟ್ಟಿದ್ದಾರೆ. 44 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 594 ಜನರು ಗುಣಮುಖರಾಗಿದ್ದಾರೆ.

114 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 21,804 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 21,572 ಜನರ ವರದಿ ಬಂದಿವೆ. ಇನ್ನೂ 232 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details