ಕೊಪ್ಪಳ:ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದಲ್ಲಿ ಬ್ಯಾಂಕ್ನಲ್ಲಿ ಕಳ್ಳತನವಾಗಿದ್ದು, ಒಂದು ಕೋಟಿ ರುಪಾಯಿಗೂ ಅಧಿಕ ಮೌಲ್ಯದ ನಗ, ನಾಣ್ಯ ದೋಚಿ ಪರಾರಿಯಾಗಿದ್ದಾರೆ.
ಯಲಬುರ್ಗಾ ತಾಲೂಕಿನಲ್ಲಿ ಬ್ಯಾಂಕ್ ಲೂಟಿ: 1ಕೋಟಿ ರೂ.ನಷ್ಟು ನಗ, ನಾಣ್ಯ ಕಳವು - ಒಂದು ಕೋಟಿ ರೂಪಾಯಿಯಷ್ಟು ನಗ ನಾಣ್ಯ ಕಳವು
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಕನ್ನ ಹಾಕಿದ ಖದೀಮರು ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಗ, ನಾಣ್ಯ ದೋಚಿದ್ದಾರೆ.

ಯಲಬುರ್ಗಾ ತಾಲೂಕಿನಲ್ಲಿ ಬ್ಯಾಂಕ್ ಲೂಟಿ
ಬೇವೂರು ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಈ ಘಟನೆ ನಡೆದಿದೆ. ಬ್ಯಾಂಕ್ ಶೆಟರ್ ಅನ್ನು ಗ್ಯಾಸ್ ಕಟರ್ನಿಂದ ಕಟ್ ಮಾಡಿ ಕಳ್ಳತನ ಮಾಡಲಾಗಿದೆ.
ಬೇವೂರು ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಕಳ್ಳತನ
ಚಿನ್ನ, ಬೆಳ್ಳಿ, ನಗದು ಸೇರಿ ಸುಮಾರು ಒಂದು ಕೋಟಿ ರುಪಾಯಿಯಷ್ಟು ಕಳ್ಳತನವಾಗಿದೆ. ಇದರ ಜೊತೆಗೆ ಬ್ಯಾಂಕ್ನಲ್ಲಿದ್ದ ಸಿಸಿ ಕ್ಯಾಮೆರಾದ ಹಾರ್ಡ್ ಡಿಸ್ಕ್ ತೆಗೆದುಕೊಂಡು ಖದೀಮರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬ್ಯಾಂಕ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬೇವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.