ಕೊಪ್ಪಳ:ಜಿಲ್ಲೆಯ ಕಾರಟಗಿಯಲ್ಲಿ ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡರು ಜನರನ್ನು ಹಣ ಕೊಟ್ಟು ಕರೆದುಕೊಂಡು ಬಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅಭಿನಂದನಾ ಕಾರ್ಯಕ್ರಮಕ್ಕೆ ಜನರನ್ನು ಹಣ ಕೊಟ್ಟು ಕರೆತಂದ್ರಾ?: ವಿಡಿಯೋ ವೈರಲ್ - ಹಣ ನೀಡಿ ನೀಡುತ್ತಿರುವ ವಿಡಿಯೋ ವೈರಲ್
ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಇಂದು ಗ್ರಾಮ ಪಂಚಾಯತ್ ಸದಸ್ಯರ ಅಭಿನಂದನಾ ಸಮಾರಂಭ ನಡೆಯಿತು. ಕಾರ್ಯಕ್ರಮಕ್ಕೆ ಜನರನ್ನು ಟ್ರ್ಯಾಕ್ಟರ್ಗಳಲ್ಲಿ ಕರೆ ತರಲಾಗಿತ್ತು. ಕಾರ್ಯಕ್ರಮಕ್ಕೆ ಬಂದ ಜನರಿಗೆ ಹಣ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಹಣ ನೀಡಿ ನೀಡುತ್ತಿರುವ ವಿಡಿಯೋ ವೈರಲ್
ಹಣ ನೀಡಿ ನೀಡುತ್ತಿರುವ ವಿಡಿಯೋ
ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಜನರಿಗೆ ಹಣ ಹಂಚುತ್ತಿರುವ ವಿಡಿಯೋ ವೈರಲ್ ಆಗಿ ಭಾರೀ ಸದ್ದು ಮಾಡುತ್ತಿದೆ. ಜಿಲ್ಲೆಯ ಕಾರಟಗಿಯಲ್ಲಿ ಇಂದು ಗ್ರಾಮ ಪಂಚಾಯತ್ ಸದಸ್ಯರ ಅಭಿನಂದನಾ ಸಮಾರಂಭ ನಡೆಯಿತು. ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಂಡಿದ್ದರು.
ಕಾರ್ಯಕ್ರಮಕ್ಕೆ ಜನರನ್ನು ಟ್ರ್ಯಾಕ್ಟರ್ಗಳಲ್ಲಿ ಕರೆ ತರಲಾಗಿತ್ತು. ಕಾರ್ಯಕ್ರಮಕ್ಕೆ ಬಂದ ಜನರಿಗೆ ಹಣ ನೀಡಿ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರತಿಯೊಬ್ಬರಿಗೂ 500 ರೂ.ನಂತೆ ಹಣ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.