ಕೊಪ್ಪಳ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೆಲ ನಿಯಮಗಳ ಸಡಿಲಿಕೆಯೊಂದಿಗೆ 4ನೇ ಹಂತದ ಲಾಕ್ಡೌನ್ ಮುಂದುವರಿದಿದ್ದು, ಭಾನುವಾರ ಕೊಪ್ಪಳ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಆದೇಶದಂತೆ ಭಾನುವಾರ ಸಂಪೂರ್ಣ ದಿಗ್ಬಂಧನದ ಮಾರ್ಗಸೂಚಿಗಳು ಪಾಲಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಭಾನುವಾರ ಮನೆಯಿಂದ ಹೊರಬರದಂತೆ ಜನರಿಗೆ ಕೊಪ್ಪಳ ಪೊಲೀಸರ ಎಚ್ಚರಿಕೆ
ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ 4ನೇ ಹಂತದ ಲಾಕ್ಡೌನ್ ಜಾರಿ ಮಾಡಲಾಗಿದ್ದು, ರಾಜ್ಯದಾದ್ಯಂತ ಭಾನುವಾರ ಸಂಪೂರ್ಣ ಲಾಕ್ಡೌನ್ ವಿಧಿಸಲಾಗುತ್ತಿದೆ. ಭಾನುವಾರ ಜನರು ಅನಗತ್ಯವಾಗಿ ಮನೆಯಿಂದ ಹೊರಬಾರದಂತೆ ಕೊಪ್ಪಳ ಪೊಲೀಸರು ಎಚ್ಚರಿಸಿದ್ದಾರೆ.
ಭಾನುವಾರ ಮನೆಯಿಂದ ಹೊರಬರದಂತೆ ಜನರಿಗೆ ಕೊಪ್ಪಳ ಪೊಲೀಸ್ ಎಚ್ಚರಿಕೆ
ನಗರದಲ್ಲಿ ಆಟೋದಲ್ಲಿ ಮೈಕ್ ಮೂಲಕ ಜನರಿಗೆ ಸಂಪೂರ್ಣ ಲಾಕ್ಡೌನ್ ಬಗ್ಗೆ ಮಾಹಿತಿ ನೀಡಲಾಯಿತು. ಕೇಂದ್ರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಿದರು. ಅಗತ್ಯ ವಸ್ತು, ಸೇವೆಗಳು ಹೊರತುಪಡಿಸಿ ಎಲ್ಲ ಅಂಗಡಿಗಳನ್ನು ಬಂದ್ ಮಾಡಬೇಕು. ವಾಹನಗಳ ಸಂಚಾರಕ್ಕೆ ನಿಷೇಧವಿದ ಎಂದು ಸೂಚನೆ ನೀಡಿದರು.
ಜನರು ಭಾನುವಾರದ ಸಂಪೂರ್ಣ ಲಾಕ್ಡೌನ್ಗೆ ಸಹಕರಿಸುವ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಬೇಕು. ನಿಯಮ ಪಾಲಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.