ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಕಾಮ ದಹನ ವೇಳೆ ಗಲಾಟೆ ಪ್ರಕರಣ: 41 ಜನರ ಬಂಧನ - KopKoppal quarrel case

ಕಾಮ ದಹನ ಸಂದರ್ಭದಲ್ಲಿ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿದ್ದು, ಈಗ ಒಟ್ಟು 41 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಕೊಪ್ಪಳ ಡಿವೈಎಸ್ಪಿ ವೆಂಕಟಪ್ಪ ನಾಯಕ ತಿಳಿಸಿದ್ದಾರೆ.

Koppal quarrel case
ಡಿವೈಎಸ್ಪಿ ವೆಂಕಟಪ್ಪ ನಾಯಕ

By

Published : Mar 11, 2020, 11:58 AM IST

ಕೊಪ್ಪಳ:ಕಾಮ ದಹನ ಸಂದರ್ಭದಲ್ಲಿ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿದ್ದು, ಈಗ ಒಟ್ಟು 41 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಕೊಪ್ಪಳ ಡಿವೈಎಸ್ಪಿ ವೆಂಕಟಪ್ಪ ನಾಯಕ ತಿಳಿಸಿದ್ದಾರೆ.

ಡಿವೈಎಸ್ಪಿ ವೆಂಕಟಪ್ಪ ನಾಯಕ

ಪ್ರಕರಣ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎರಡು ಸಮುದಾಯಗಳ ನಡುವೆ ಮಾ. 9ರಂದು ರಾತ್ರಿ ಕಾಮ ದಹನ ಸಂದರ್ಭದಲ್ಲಿ ಗಲಾಟೆ ನಡೆದಿದೆ. ದಲಿತ ಸಮುದಾಯದ ಜನರು 38 ಜನರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಿದ್ದಾರೆ. ಈ ಪೈಕಿ 34 ಜನರನ್ನು ಈಗಾಗಲೇ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಾ. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನು ಇನ್ನೊಂದು ಸಮುದಾಯದ ಜನರು ಸಹ ಪ್ರತಿ ದೂರು ದಾಖಲಿಸಿದ್ದು, 13 ಜನರ ಮೇಲೆ ಫಿರ್ಯಾದಿ ನೀಡಿದ್ದಾರೆ. ಆ ಪೈಕಿ ಈಗ 7 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಾಗೆಯೇ ಇನ್ನುಳಿದ ಎಲ್ಲಾ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವದು ಎಂದರು.

ಅಂದು ಘಟನೆ ನಡೆದಿರುವ ಕುರಿತಂತೆ ಮಾಹಿತಿ ಬಂದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ನಮ್ಮ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಕಾಮ ದಹನ ಸಂದರ್ಭದಲ್ಲಿ ಎಲ್ಲಾ ಗ್ರಾಮಗಳಲ್ಲಿಯೂ ಸಹ ಸಿಬ್ಬಂದಿ ನೇಮಕ ಮಾಡಿರುತ್ತೇವೆ. ಘಟನೆ ಹಿನ್ನೆಲೆಯಲ್ಲಿ ಈಗಾಗಲೇ ಗುಳದಳ್ಳಿ ಗ್ರಾಮದಲ್ಲಿ ಶಾಂತಿಸಭೆ ನಡೆಸಿದ್ದೇವೆ. ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈಗ ಗ್ರಾಮದಲ್ಲಿ ಯಾವುದೇ ಅಶಾಂತಿಯ ವಾತಾವರಣವಿಲ್ಲ. ಪರಿಸ್ಥಿತಿ ತಿಳಿಯಾಗಿದೆ ಎಂದು ತಿಳಿಸಿದರು.

ABOUT THE AUTHOR

...view details