ಗಂಗಾವತಿ: ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದಿದ್ದ ಕೋಮು ಘರ್ಷಣೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಕರ್ತವ್ಯ ಲೋಪವೇ ಕಾರಣ ಎಂದು ಆರೋಪಿ ಪೊಲೀಸ್ ಇಲಾಖೆಯ ನಾಲ್ವರು ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಎಸ್ಪಿ ಅರುಣಾಂಗ್ಶು ಗಿರಿ ಅವರ ಸೂಚನೆ ಮೆರೆಗೆ ಪ್ರಕರಣದ ತನಿಖೆ ಜವಾಬ್ದಾರಿ ಹೊತ್ತ ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ಸಲ್ಲಿಸಿದ ವರದಿ ಆಧರಿಸಿ ಇಲಾಖೆಯ ಮೇಲಾಧಿಕಾರಿಗಳು ಕನಕಗಿರಿ ಪೊಲೀಸ್ ಠಾಣೆಯ ಪಿಐ ಪರಸಪ್ಪ ಭಜಂತ್ರಿ, ಎಎಸ್ಐ ಮಂಜುನಾಥ ಹಾಗೂ ಪೇದೆಗಳಾದ ಹನುಮಂತಪ್ಪ ಮತ್ತು ಸಂಗಪ್ಪ ಮೇಟಿ ಮೇಲೆ ಶಿಸ್ತು ಕ್ರಮ ಭಾಗವಾಗಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.