ಕೊಪ್ಪಳ:ರಾಸಲೀಲೆ ಮತ್ತು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ಧಾರವಾಡ ಜಿಲ್ಲೆಯಲ್ಲಿ ಆರೋಪಿ ಶಿಕ್ಷಕ ಮಹ್ಮದ್ ಅಜರುದ್ದೀನ್ನನ್ನು ವಶಕ್ಕೆ ಪಡೆಯಲಾಗಿದೆ.
ರಾಯಚೂರು ಜಿಲ್ಲೆಯ ಸಿಂಧನೂರ ತಾಲೂಕಿನ ಸಿಂಗಾಪೂರ ಗ್ರಾಮದ ಶಿಕ್ಷಕ ಅಜರುದ್ದೀನ್ ನೆರೆಮನೆಯ ಮಹಿಳೆಯರು ಮತ್ತು ಮಕ್ಕಳನ್ನ ಕಾಮದಾಟಕ್ಕೆ ಬಳಸಿಕೊಂಡಿದ್ದ ಎನ್ನುವ ವಿಡಿಯೋ ವೈರಲ್ ಆಗಿದ್ದವು. ಶಿಕ್ಷಕನ ವಿರುದ್ಧ ವಿಡಿಯೋದಲ್ಲಿರುವ ಮಹಿಳೆಯೇ ದೂರು ನೀಡಿದ್ದರು. ಬಳಿಕ ಎಫ್ಐಆರ್ ದಾಖಲಾಗುತ್ತಿದ್ದಂತೆ ಅಜರುದ್ದೀನ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದ.